ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ; ಫಾರ್ಚುನರ್ ಡಿಕ್ಕಿಗೆ ಆಲ್ಟೊ ಕಾರು ಚಾಲಕ ಬಲಿ!

ಮಂಗಳೂರು: ಪಾರ್ಚೂನರ್ ಕಾರು ಮತ್ತು ಆಲ್ಟೋ ಕಾರು ನಡುವೆ ನಗರದ ಉರ್ವ ಮಾರಿಗುಡಿ ಸಮೀಪ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಲ್ಟೊ ಕಾರು ಚಾಲಕರೊಬ್ಬರು ಮೃತಪಟ್ಟಿದ್ದಾರೆ.

ಉರ್ವ ಗಾಂಧಿನಗರದ ಸರ್ಕಾರಿ ಶಾಲೆಯ ಬಳಿ ಆಲ್ಟೊ ಕಾರಿಗೆ ಫಾರ್ಚುನರ್ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಆಲ್ಟೊ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದರೂ, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.