Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹೋಟೆಲ್‌ನಲ್ಲಿ ಘೋರ ಅಸಹ್ಯ: ತಂದೂರಿ ರೊಟ್ಟಿಗೆ ಉಗುಳಿ ಗ್ರಾಹಕರಿಗೆ ಬಡಿಸುತ್ತಿದ್ದ ಕಿರಾತಕ; ವಿಡಿಯೋ ವೈರಲ್!

Spread the love

ಸಹರಾನ್‌ಪುರ: ಇಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಹೋಟೆಲ್‌ ಒಂದರಲ್ಲಿ ತಂದೂರಿ ರೊಟ್ಟಿ ತಯಾರಿಸುವಾಗ ಅದರ ಮೇಲೆ ಉಗುಳುತ್ತಿದ್ದ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಇದಕ್ಕೆ ಸಂಬಂಧಿಸಿದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿದೆ. ಸಾರ್ವಜನಿಕರ ಆರೋಗ್ಯದ ಜೊತೆ ಚಲ್ಲಾಟವಾಡುತ್ತಿದ್ದ ಆರೋಪಿಯನ್ನು ಪೊಲೀಸರು ಸದ್ಯ ಬಂಧಿಸಿದ್ದಾರೆ.
ಗ್ರಾಹಕರಿಗೆ ನೀಡುವ ಆಹಾರದ ಮೇಲೆ ಉಗುಳುತ್ತಿದ್ದ ಈತನ ಅಸಹ್ಯಕರ ಕೃತ್ಯವನ್ನು ಯಾರೋ ಮೊಬೈಲ್‌ನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ವೀಡಿಯೊ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಸಹರಾನ್‌ಪುರ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಹೋಟೆಲ್‌ ಮೇಲೆ ದಾಳಿ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಘಟನೆಯು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಹೋಟೆಲ್‌ಗಳ ಸ್ವಚ್ಛತೆ ಮತ್ತು ಆಹಾರದ ಸುರಕ್ಷತೆಯ ಬಗ್ಗೆ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿದೆ. ಇಂತಹ ಕೃತ್ಯಗಳು ಕೇವಲ ಅಸಹ್ಯಕರ ಮಾತ್ರವಲ್ಲದೆ, ಜನರ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದ್ದು, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *