Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭಾರೀ ಮಳೆಗೆ ಕುಸಿದ ಮನೆಯ ಗೋಡೆ; ಅವಶೇಷಗಳ ಅಡಿ ಸಿಲುಕಿ ಎಂಟು ವರ್ಷದ ಬಾಲಕಿ ಸಾ*ವು

Spread the love

ಯಾದಗಿರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಡಗೇರಾ ತಾಲೂಕಿನ ತುಮಕೂರು ಗ್ರಾಮದಲ್ಲಿ ಸೋಮವಾರ ನಡೆದಿದೆ

ಗ್ರಾಮದ ಅಕ್ಷತಾ (8) ಮೃತಪಟ್ಟ ದುರ್ದೈವಿ. ಬಾಲಕಿ ಮನೆಯ ಅಂಗಳದಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಅಡುಗೆ ಮನೆಯ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಗೋಡೆಯ ಅವಶೇಷಗಳ ಅಡಿಯಲ್ಲಿ ಸಿಲುಕಿದ ಅಕ್ಷತಾ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. ಘಟನೆಯಲ್ಲಿ ಇತರ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಯಾದಗಿರಿಯ ‘ಯೀಮ್ಸ್’ (YIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ದುರ್ಘಟನೆ ನಡೆದ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹರ್ಷಲ್ ಭೋಯರ್, ಜಿಲ್ಲಾ ಪಂಚಾಯತ್ ಸಿಇಓ ಲವೀಶ್ ಒರಡಿಯಾ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ ಶಂಕರ್ ಅವರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಬಾಲಕಿಯ ಕುಟುಂಬಕ್ಕೆ ಸಾಂತ್ವನ ಹೇಳಿದ ಅಧಿಕಾರಿಗಳು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ. ಈ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *