ಹುಬ್ಬಳ್ಳಿ ಪರಾರಿಯಾಗಲೆತ್ನಿಸಿದ 2 ದರೋಡೆ ಆರೋಪಿಗಳ ಕಾಲಿಗೆ ಪೊಲೀಸರಿಂದ ಗುಂಡೇಟು, ಮೂವರು ಪರಾರಿ

ಹುಬ್ಬಳ್ಳಿ: ದರೋಡೆ ಮತ್ತು ಸುಲಿಗೆ ಪ್ರಕರಣಗಳಿಗೆ ಸಂಬಂಧಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಗುಜರಾತ್ ಮೂಲದ ದಿಲೀಪ್ ಮತ್ತು ನಿಲೇಶ್ ಬಂಧಿತ ಆರೋಪಿಗಳು. ಇವರ ಜೊತೆಗಿದ್ದ ಇತರ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ರಾತ್ರಿ ಬೈಕ್ ಸವಾರರನ್ನು ಸುಲಿಗೆ ಮಾಡಿ ಮನೆಯೊಂದರಿಂದ ದರೋಡೆಗೆ ಯತ್ನಿಸಿದ ಆರೋಪಿಗಳನ್ನು ಸೆರೆ ಹಿಡಿಯಲು ಮುಂದಾದಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಶೂಟೌಟ್ ಮಾಡಿದ್ದರಿಂದ ಗಾಯಗೊಂಡ ಇಬ್ಬರನ್ನು ಬಂಧಿಸಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಮೂವರು ಪೊಲೀಸ್ ಸಿಬ್ಬಂದಿಯನ್ನೂ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
