ಪತ್ನಿ ಮೊಬೈಲ್ ನೋಡುತ್ತಿರುತ್ತಾಳೆ ಎಂಬ ಸಿಟ್ಟಿಗೆ ಪ್ರಾಣವನ್ನೇ ತೆಗೆದ ಗಂಡ

ಕುಂದಾಪುರ : ಹೆಂಡತಿ ಯಾವಾಗಲೂ ಮೊಬೈಲ್ ನೋಡುತ್ತಾಳೆ ಎಂದು ಸಿಟ್ಟಿಗೆದ್ದ ಪತಿ , ತನ್ನ ಪತ್ನಿಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ ಘಟನೆ ಬ್ರಹ್ಮಾವರ ತಾಲೂಕು ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ಘಟನೆ ಜೂನ್ 19 ರ ರಾತ್ರಿ 11.30ಕ್ಕೆ ನಡೆದಿದೆ.


ಕೊಲೆಗೀಡಾದವರನ್ನು ಹೊಸಮಠ ನಿವಾಸಿ ರೇಖಾ(27) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ, ಆಕೆಯ ಪತಿ ಕೊಳಂಬೆ ಗ್ರಾಮದ ನಿವಾಸಿ ಗಣೇಶ ಪೂಜಾರಿ(42) ಎಂಬಾತನನ್ನು ಶಂಕರನಾರಾಯಣ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಗಣೇಶ್ ಪೂಜಾರಿ ವಿಪರೀತ ಮಧ್ಯ ವ್ಯಸನ ಚಟವುಳ್ಳವನಾಗಿದ್ದ. ಪತ್ನಿ ಹೆಚ್ಚಾಗಿ ಮೊಬೈಲ್ ಉಪಯೋಗಿಸುತ್ತಾಳೆಂದು ಸಿಟ್ಟಿನಿಂದ ವಿಪರೀತ ಮಧ್ಯ ಸೇವನೆ ಮಾಡಿ ಗುರುವಾರ ರಾತ್ರಿ ಮನೆಯಲ್ಲಿ ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾನೆ. ವೃತ್ತಿಯಲ್ಲಿ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದ ಗಣೇಶ್ ಪೂಜಾರಿ ಹಾಗೂ ರೇಖಾಳಿಗೆ 8 ವರ್ಷಗಳ ಹಿಂದೆ ಮದುವೆಯಾಗಿದ್ದು ಇಬ್ಬರು ಮಕ್ಕಳಿದ್ದಾರೆ. ರೇಖಾ ಪೆಟ್ರೋಲ್ ಬಂಕ್ವೊಂದರಲ್ಲಿ ಕೆಲಸಕ್ಕಿದ್ದರು. ಈ ಮಧ್ಯೆ ಗಣೇಶ್ ಮೊಬೈಲ್ ವಿಚಾರದಲ್ಲಿ ಆಗಾಗ್ಗೆ ಗಲಾಟೆ ಮಾಡುತ್ತಿದ್ದ ಎಂದು ಹೇಳಲಾಗಿದೆ.
