Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

‘ನಾನು ನಾರಾಯಣಸ್ವಾಮಿ ಮನೆಯಿಂದಲೇ ವಾಚ್ ಕದ್ದಿದ್ದೇನೆ’: ದುಬಾರಿ ವಾಚ್ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ!

Spread the love

ಬೆಂಗಳೂರು: ನಾನು ನಾರಾಯಣಸ್ವಾಮಿ (Chalavadi Narayanaswamy) ಅವರ ಮನೆಯಿಂದಲೇ ವಾಚ್ (Watch) ಕದ್ದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಲೇವಡಿ ಮಾಡಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಿಮ್ಮ ಅಫಿಡವಿಟ್‌ನಲ್ಲಿ ದುಬಾರಿ ವಾಚ್ ಬಗ್ಗೆ ತಿಳಿಸಿಲ್ಲ ಎಂಬ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ನಾರಾಯಣಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ನನ್ನ ಬಳಿ ಇರುವ ದುಬಾರಿ ವಾಚ್‌ಗಳ ಬಗ್ಗೆ ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ಆ ವಾಚ್ ಖರೀದಿ ಬಗ್ಗೆ ನನಗೆ ಗೊತ್ತು, ಬಿಜೆಪಿಯವರಿಗೇನು ಗೊತ್ತು ಎಂದು ಪ್ರಶ್ನಿಸಿದರು

ಕಾಸು ಕೊಟ್ಟಿರುವುದು ನಾನು. ಕ್ರೆಡಿಟ್ ಕಾರ್ಡ್ ಬಳಸಿರೋದು ನಾನು. ನಾನು ಎಲ್ಲವನ್ನೂ ಪಾರದರ್ಶಕವಾಗಿ ಹೇಳಿದ್ದೇನೆ. ನನ್ನ ಬಳಿ ರೋಲೆಕ್ಸ್ ವಾಚ್ ಇರುವುದನ್ನೂ ಹೇಳಿದ್ದೇನೆ. ನಾರಾಯಣಸ್ವಾಮಿಯಿಂದ ಕಲಿಯುವುದೇನಿಲ್ಲ ಎಂದು ಹೇಳಿದರು


Spread the love
Share:

administrator

Leave a Reply

Your email address will not be published. Required fields are marked *