Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಆಶೀರ್ವಾದದ ನೆಪದಲ್ಲಿ ಅನುಚಿತ ಸ್ಪರ್ಶ: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಅರೆಸ್ಟ್.

Spread the love

ಶಿಮ್ಲಾ: ಹಿಮಾಚಲ ಪ್ರದೇಶದ ಪ್ರಸಿದ್ಧ ಪ್ರವಾಸಿ ತಾಣವಾದ ಶಿಮ್ಲಾದ ಮಾಲ್ ರೋಡ್‌ನಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಸಾಧುವಿನ ವೇಷ ಧರಿಸಿ ಮಹಿಳೆಯರನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದ ಎನ್ನಲಾಗಿದೆ.

ಶಿಮ್ಲಾದ ಮಾಲ್ ರೋಡ್‌ನಲ್ಲಿ ಸಾಧು ವೇಷ ಧರಿಸಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕ ಈಗ ಜೈಲು ಪಾಲಾಗಿದ್ದಾನೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಈತನನ್ನು ಹೆಡೆಮುರಿ ಕಟ್ಟಿದ್ದಾರೆ.

ಏನಿದು ಘಟನೆ

ಕಳೆದ ಕೆಲವು ದಿನಗಳಿಂದ ಈ ಸಾಧು ವೇಷಧಾರಿಯು ಮಾಲ್ ರೋಡ್‌ನಲ್ಲಿ ಓಡಾಡುತ್ತಾ, ಆಶೀರ್ವಾದ ಮಾಡುವ ನೆಪದಲ್ಲಿ ಅಥವಾ ಜನದಟ್ಟಣೆಯ ಲಾಭ ಪಡೆದು ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದನು. ಈತನ ಅಸಭ್ಯ ವರ್ತನೆಯ ದೃಶ್ಯಗಳನ್ನು ಯಾರೋ ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಯಿತು. ಕೂಡಲೇ ಎಚ್ಚೆತ್ತ ಶಿಮ್ಲಾ ಪೊಲೀಸರು ತನಿಖೆ ನಡೆಸಿ, ವಿಡಿಯೋದಲ್ಲಿದ್ದ ವ್ಯಕ್ತಿಯನ್ನು ಗುರುತಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *