Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಊದುಬತ್ತಿಯಿಂದ ಸುಟ್ಟು ಮನೆ ಮದ್ದು-7 ತಿಂಗಳ ಮಗು ಸಾವು

Spread the love

ಕೊಪ್ಪಳ : ಜಿಲ್ಲೆಯ ಕನಕಗಿರಿ ತಾಲೂಕಿನ ವಿಠಲಾಪುರದಲ್ಲಿ ಮಗುವಿಗೆ ಜ್ವರ ಬಂದಿದೆ ಎಂದು ಪೋಷಕರು ಊದುಬತ್ತಿಯಿಂದ ಸುಟ್ಟಿದ್ದು, ಇದರಿಂದ ಮಗು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಅಂತಹದ್ದೇ 18 ಪ್ರಕರಣಗಳು ಬೆಳಕಿಗೆ ಬಂದಿವೆ. ಕನಕಗಿರಿ ತಾಲೂಕಿನ ವಿಠಲಾಪುರದಲ್ಲಿ 7 ತಿಂಗಳ ಮಗುವಿಗೆ ಜ್ವರ ಕಡಿಮೆಯಾಗಲಿಲ್ಲಎಂದು ಮಗುವಿನ ತಾಯಿ ಡಿ.4 ರಂದು ಊದುಬತ್ತಿಯಿಂದ ಸುಟ್ಟಿದ್ದಳು. ಬಳಿಕ ಮಗುವಿಗೆ ಚಿಕಿತ್ಸೆ ಕೊಡಿಸಲು ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಗು ಚಿಕಿತ್ಸೆಫಲಿಸದೆ ಮೃತಪಟ್ಟಿತ್ತು. ಫೆ.2ರಂದು ನಡೆದ ಶಿಶು ಮರಣ ತಡೆವ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾಧಿಕಾರಿನಲಿನ್ ಅತುಲ್, ಪಾಲಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದ ಮೇಲೆ ಕನಕಗಿರಿ ಠಾಣೆಯಲ್ಲಿ ಎಫ್‌ಐಆರ್‌ದಾಖಲಿಸಲಾಗಿತ್ತು. ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆಸ್ಪತ್ರೆಯಲ್ಲಿ ಮಕ್ಕಳು ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿರುವ ಪ್ರಕರಣಗಳನ್ನು ಪತ್ತೆ ಮಾಡಿದಾಗ, ಜ್ವರ ಬಂದ ಮಕ್ಕಳಿಗೆ ಪೋಷಕರು ಊದುಬತ್ತಿಯಿಂದ ಸುಟ್ಟಿರುವುದು ಗೊತ್ತಾಗಿದೆ. ಈ ಕುರಿತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಕ್ರಮವಹಿಸುವಂತೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿ ಈ ಮಕ್ಕಳ ಬಗ್ಗೆ ನಿಗಾವಹಿಸಲು ಮತ್ತು ಪ್ರಕರಣ ದಾಖಲಿಸಲು ಸೂಚಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *