Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಿಸಿಲಿನ ತೀವ್ರತೆ ಹೆಚ್ಚಳ – ಮುಂಜಾಗ್ರತಾ ಕ್ರಮಗಳಿಗೆ ಸರ್ಕಾರದ ಸೂಚನೆ

Spread the love

ರಾಯಚೂರು: ಈ ವರ್ಷ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆಯಿದ್ದು, ಮಧ್ಯಾಹ್ನ 12 ರಿಂದ 3 ರವರೆಗೆ ಹೊರಗೆ ಕೆಲಸ ಮಾಡಬಾರದು, ಮನೆ, ಕಚೇರಿಯಲ್ಲೇ ಇರಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ
ರಾಯಚೂರಿನಲ್ಲಿ ಮಾತನಾಡಿದ ಅವರು, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇವೆ. ಬಿಸಿಲು ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆಯ ಬಗ್ಗೆ ಸರ್ಕಾರ ಮಟ್ಟದಲ್ಲಿ ತೀರ್ಮಾನ ಮಾಡಿಕೊಳ್ಳಲಿ. ಮಧ್ಯಾಹ್ನ ಹೊತ್ತು ಫೀಲ್ಡ್ ವಿಸಿಟ್ ಮಾಡುವುದನ್ನು ಅಧಿಕಾರಿಗಳು ಬಿಡಬೇಕು. ಸರ್ಕಾರಿ ನೌಕರರು ಹೊರಗಡೆ ವೀಕ್ಷಣೆಯನ್ನು ಮಧ್ಯಾಹ್ನ 12 ರಿಂದ 3ರ ವರೆಗೆ ಮಾಡಬಾರದು. ಬೆಳಗಿನ ಜಾವ ಅಥವಾ ಸಾಯಂಕಾಲ ಮಾಡಬೇಕು. ಸರ್ಕಾರ ರಜೆ ಕೊಡಬೇಕು ಅಂತ ಹೇಳುವುದಿಲ್ಲ, ಸಮಯ ಬದಲಾವಣೆ ಮಾಡಿಕೊಂಡರೆ ಒಳ್ಳೆಯದು ಎಂದು ತಿಳಿಸಿದರು.

ರಾಯಚೂರು ಜಿಲ್ಲೆ ಸೇರಿ ಈ ಭಾಗದಲ್ಲಿ 43 ರಿಂದ 44 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಹೋಗುತ್ತದೆ. ಮಧ್ಯಾಹ್ನ ಸಮಯದಲ್ಲಿ ಮನೆಯೊಳಗೆ ಅಥವಾ ಕಚೇರಿಯೊಳಗೆ ಇರುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ. ಶಾಲೆಗಳು, ಎಲ್ಲಾ ಸಂಸ್ಥೆಗಳು ಆ ಬಗ್ಗೆ ಗಮನ ಕೊಡಬೇಕು. ಆಹಾರದ ಬಗ್ಗೆಯೂ ಗಮನ ಕೊಡಬೇಕು. ಆಗಾಗ ನೀರು ಕುಡಿದರೆ ನಿರ್ಜಲೀಕರಣದಿಂದ ದೂರ ಇರಬಹುದು. ಬಿಸಿಲಿನ ತಾಪಮಾನ ಹೆಚ್ಚಳ ಹಿನ್ನೆಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಪೆಷಲ್ ವಾರ್ಡ್ ಅಗತ್ಯ ಇಲ್ಲ. ನಮ್ಮಲ್ಲಿ ಎಲ್ಲಾ ಸೌಲಭ್ಯಗಳಿವೆ ಎಂದರು.


Spread the love
Share:

administrator

Leave a Reply

Your email address will not be published. Required fields are marked *