Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪಹಲ್ಗಾಮ್ ದಾಳಿಗೆ ಪ್ರತಿಕ್ರಿಯೆ ನೀಡಲು ಭಾರತ ಸಿದ್ಧ:ಯುದ್ಧ ಭೀತಿ ಇದೆ ಎಂದ ಪಾಕ್ ರಕ್ಷಣಾ ಸಚಿವ

Spread the love

ಇಸ್ಲಾಮಾಬಾದ್ :ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು ಎಂದು ಪಾಕಿಸ್ತಾನ ರಕ್ಷಣಾ ಸಚಿವ ಖ್ವಾಜಾ ಆಸಿಫ್​ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ.

ಎರಡು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳ ನಡುವಿನ ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿರುವ ಸಮಯದಲ್ಲಿ ಈ ಹೇಳಿಕೆ ನೀಡಿದ್ದಾರೆ.

ಎಲ್‌ಒಸಿಯಲ್ಲಿ ಭಾರತ ಯಾವುದೇ ಸ್ಥಳದ ಮೇಲೆ ದಾಳಿ ಮಾಡಬಹುದು ಎಂಬ ವರದಿಗಳಿವೆ. ಸೂಕ್ತ ಪ್ರತ್ಯುತ್ತರ ನೀಡಲಾಗುವುದು, ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ಅವರು, ರಾಜಕೀಯ ಲಾಭಕ್ಕಾಗಿ ಈ ಪ್ರದೇಶವನ್ನು ಯುದ್ಧದ ಅಂಚಿಗೆ ತಳ್ಳುತ್ತಿದ್ದಾರೆ ಎಂದು ಹೇಳಿದರು.

ಪಹಲ್ಗಾಮ್ ದಾಳಿಯ ಬಗ್ಗೆ ಅಂತರರಾಷ್ಟ್ರೀಯ ತನಿಖೆಗೆ ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಒತ್ತಾಯಿಸಿದ್ದಾರೆ ಎಂದು ಹೇಳಿರುವ ಆಸಿಫ್, ಇಂತಹ ತನಿಖೆಯಿಂದ ಭಾರತವೇ ಈ ದಾಳಿಯಲ್ಲಿ ಭಾಗಿಯಾಗಿದೆಯೇ ಅಥವಾ ಯಾವುದಾದರೂ ಆಂತರಿಕ ಗುಂಪು ಭಾಗಿಯಾಗಿದೆಯೇ ಎಂಬುದು ಸ್ಪಷ್ಟವಾಗುತ್ತದೆ , ಆಧಾರರಹಿತ ಆರೋಪಗಳ ಹಿಂದಿನ ಸತ್ಯವನ್ನು ಬಹಿರಂಗಪಡಿಸುತ್ತದೆ ಎಂದರು.

ಕಳೆದ ವಾರ, ಪಾಕಿಸ್ತಾನದ ಮಾಹಿತಿ ಸಚಿವ ಅಟ್ಟಾ ತರಾರ್ ಅವರು ಮುಂದಿನ 24 ರಿಂದ 36 ಗಂಟೆಗಳು ಬಹಳ ನಿರ್ಣಾಯಕ ಎಂದು ಹೇಳಿದ್ದರು. ಭಾರತದಿಂದ ದಾಳಿಯ ಸಾಧ್ಯತೆಯನ್ನು ವ್ಯಕ್ತಪಡಿಸಿದ್ದರು. ಆದರೆ ಈ ಸಮಯ ಕಳೆದಿದೆ ಮತ್ತು ಭಾರತ ಯಾವುದೇ ಕ್ರಮ ಕೈಗೊಂಡಿಲ್ಲ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದರು, ಅದರಲ್ಲಿ ಹೆಚ್ಚಿನವರು ಪ್ರವಾಸಿಗರಾಗಿದ್ದರು. ದಕ್ಕೆ ಪ್ರತಿಕ್ರಿಯೆಯಾಗಿ, ಭಾರತವು ಸಿಂಧೂ ನದಿ ಜಲ ಒಪ್ಪಂದವನ್ನು ಅಮಾನತುಗೊಳಿಸುವುದು, ಅಟ್ಟಾರಿಯಲ್ಲಿ ಗಡಿಯನ್ನು ಮುಚ್ಚುವುದು ಮತ್ತು ರಾಜತಾಂತ್ರಿಕ ಸಂಬಂಧಗಳನ್ನು ಕೆಳಮಟ್ಟಕ್ಕಿಳಿಸುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಹಲವಾರು ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ.

ರಾಜ್ಯಗಳು ನಾಗರಿಕ ರಕ್ಷಣೆಗೆ ಸಿದ್ಧರಾಗಲು ಮತ್ತು ವಾಯುದಾಳಿ ಎಚ್ಚರಿಕೆ ಸೈರನ್‌ಗಳನ್ನು ಬಳಸಲು ಕೇಳಿಕೊಳ್ಳಲಾಗಿದೆ. ನಾವು 2016 ಮತ್ತು 2017 ರಲ್ಲಿ ವಿಶ್ವಸಂಸ್ಥೆಗೆ ಭಾರತ ಭಯೋತ್ಪಾದನೆಗೆ ಹಣಕಾಸು ಒದಗಿಸುತ್ತಿರುವ ವೀಡಿಯೊಗಳನ್ನು ಒಳಗೊಂಡಂತೆ ಪುರಾವೆಗಳನ್ನು ಒದಗಿಸಿದ್ದೇವೆ ಎಂದು ಹೇಳಿದ್ದಾರೆ.

ಎರಡೂ ಪ್ರಾಂತ್ಯಗಳಲ್ಲಿ ಇತ್ತೀಚೆಗೆ ಸಂಭವಿಸಿದ ಭಯೋತ್ಪಾದನೆಯ ಅಲೆಯನ್ನು ಭಾರತದ ಬೆಂಬಲಿತ ಗುಂಪುಗಳು ಎಂದು ಹೇಳಲಾಗುತ್ತಿದ್ದು, ಅಫ್ಘಾನಿಸ್ತಾನದಿಂದ ಕಾರ್ಯನಿರ್ವಹಿಸುತ್ತಿವೆ ಎಂದು ಅವರು ಹೇಳಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *