ಭಾರತ ಟೆಸ್ಟ್ ತಂಡ ಪ್ರಕಟ: ಅಚ್ಚರಿಯ ಆಯ್ಕೆಗಳು, ಹೊಸ ಮುಖಗಳಿಗೆ ಅವಕಾಶ; ತಂಡದ ವಿವರ ಇಲ್ಲಿದೆ

ಭಾರತ ಮತ್ತು ವೆಸ್ಟ್ ಇಂಡೀಸ್ (IND vs WI) ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಅಹಮದಾಬಾದ್ ಹಾಗೂ ದೆಹಲಿಯಲ್ಲಿ ನಡೆಯಲಿರುವ ಈ ಸರಣಿಗಾಗಿ 15 ಸದಸ್ಯರುಗಳ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಕಾಣಿಸಿಕೊಂಡಿಲ್ಲ.

ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡವನ್ನು ಶುಭ್ಮನ್ ಗಿಲ್ ಮುನ್ನಡೆಸಲಿದ್ದಾರೆ. ಇನ್ನು ಉಪನಾಯಕನಾಗಿ ರವೀಂದ್ರ ಜಡೇಜಾ ಕಾಣಿಸಿಕೊಳ್ಳಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಟೀಮ್ ಇಂಡಿಯಾ ಉಪನಾಯಕ ರಿಷಭ್ ಪಂತ್ ಗಾಯಗೊಂಡಿದ್ದರು. ಹೀಗಾಗಿ ವಿಂಡೀಸ್ ಸರಣಿಯಿಂದ ಹೊರಗುಳಿದಿದ್ದಾರೆ.
ರಿಷಭ್ ಪಂತ್ ಅವರ ಅಲಭ್ಯತೆಯ ನಡುವೆ ಭಾರತ ತಂಡದ ವಿಕೆಟ್ ಕೀಪರ್ ಆಗಿ ಧ್ರುವ್ ಜುರೆಲ್ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಬ್ಯಾಕಪ್ ವಿಕೆಟ್ ಕೀಪರ್ ಆಗಿ ತಮಿಳುನಾಡು ಮೂಲದ ಎನ್. ಜಗದೀಸನ್ ಆಯ್ಕೆಯಾಗಿದ್ದಾರೆ. ಹಾಗೆಯೇ ಯುವ ಸ್ಪಿನ್ನರ್ ಮಾನವ್ ಸುತಾರ್ಗೆ ಇದೇ ಮೊದಲ ಬಾರಿಗೆ ಭಾರತ ತಂಡದಲ್ಲಿ ಸ್ಥಾನ ನೀಡಲಾಗಿದೆ.
ಇನ್ನುಳಿದಂತೆ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡ ಬಹುತೇಕ ಆಟಗಾರರು ವಿಂಡೀಸ್ ಸರಣಿಯಲ್ಲೂ ಕಣಕ್ಕಿಳಿಯಲಿದ್ದಾರೆ. ಅದರಂತೆ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಇನಿಂಗ್ಸ್ ಆರಂಭಿಸಲಿದ್ದಾರೆ.
ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಬೀಸಲಿದ್ದಾರೆ. ನಾಲ್ಕನೇ ಕ್ರಮಾಂಕವು ಶುಭ್ಮನ್ ಗಿಲ್ಗೆ ಫಿಕ್ಸ್. ಐದನೇ ಕ್ರಮಾಂಕದಲ್ಲಿ ಧ್ರುವ್ ಜುರೆಲ್ ಕಾಣಿಸಿಕೊಂಡರೆ, ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ. ಮೊಹಮ್ಮದ್ ಸಿರಾಜ್ ಹಾಗೂ ಆಕಾಶ್ ದೀಪ್ ತಂಡದಲ್ಲಿದ್ದಾರೆ. ಅದರಂತೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡ ಈ ಕೆಳಗಿನಂತಿದೆ…
ಭಾರತ ಟೆಸ್ಟ್ ತಂಡ: ಶುಭ್ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಎನ್ ಜಗದೀಸನ್ (ವಿಕೆಟ್ ಕೀಪರ್). ಅಕ್ಷರ್ ಪಟೇಲ್.
ಭಾರತ vs ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ:
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಣ ಟೆಸ್ಟ್ ಸರಣಿಯು ಅಕ್ಟೋಬರ್ 2 ರಿಂದ ಶುರುವಾಗಲಿದೆ. ಎರಡು ಪಂದ್ಯಗಳ ಈ ಸರಣಿಗೆ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಹಾಗೂ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…
