ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ – 3 ತಿಂಗಳಲ್ಲಿ ಎರಡನೇ ಘಟನೆ

ನವದೆಹಲಿ : ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ದ ವಿಮಾನವೊಂದು ತರಭೇತಿ ವೇಳೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಪತನಾಗಿದೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.

ಚುರು ಜಿಲ್ಲೆಯ ರತನ್‌ಗಢ ಪಟ್ಟಣದಲ್ಲಿ ಯುದ್ಧ ವಿಮಾನ ಅಪಘಾತಕ್ಕೀಡಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ. ಸಾವು ನೋವಿನ ಕುರಿತು ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
3 ತಿಂಗಳಲ್ಲಿ ನಡೆದ ಎರಡನೇ ವಿಮಾನ ಅಪಘಾತ ಇದಾಗಿದೆ. ಏಪ್ರಿಲ್‌ನಲ್ಲಿ ಗುಜರಾತ್‌ನ ಜಾಮ್‌ನಗರ ನಗರದಿಂದ ಸುಮಾರು 12 ಕಿಲೋಮೀಟರ್ ದೂರದಲ್ಲಿರುವ ಸುವರ್ದಾ ಗ್ರಾಮದ ಬಳಿ ತರಬೇತಿ ಕಾರ್ಯಾಚರಣೆ ನಡೆಸುತ್ತಿದ್ದ ಜಾಗ್ವಾರ್ ವಿಮಾನ ಪತನಗೊಂಡಿತ್ತು.