ಅಮೆರಿಕಾದಲ್ಲಿ ಶಾಪ್‌ಲಿಫ್ಟಿಂಗ್ ಮಾಡುತ್ತಿದ್ದ ಭಾರತೀಯ ಮೂಲದ ಯುವತಿ: ವಿಡಿಯೋ ವೈರಲ್

ಅಮೆರಿಕಾದ ಟಾರ್ಗೆಟ್ (Target) ಸ್ಟೋರ್‌ನಲ್ಲಿ ಶಾಪ್‌ಲಿಫ್ಟಿಂಗ್ ಮಾಡುತ್ತಿದ್ದ ಭಾರತೀಯ ಮೂಲದ ಯುವತಿಯೊಬ್ಬಳು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಬೆಳಕಿಗೆ ಬಂದಿದೆ. ಸುಮಾರು ₹1 ಲಕ್ಷ ಮೌಲ್ಯದ ವಸ್ತುಗಳನ್ನು ಕದ್ದಿದ್ದ ಆಕೆ, ತನಿಖೆ ವೇಳೆ ತಾನು ಹಿಂದೆಯೂ ಇಂತಹ ಕೃತ್ಯಗಳಲ್ಲಿ ತೊಡಗಿಕೊಂಡಿದ್ದೆ ಎಂದು ಒಪ್ಪಿಕೊಂಡಿದ್ದಾಳೆ ಎಂದು ವರದಿಗಳು ತಿಳಿಸಿವೆ.

ಈ ಘಟನೆ ಈ ವರ್ಷದ ಜನವರಿಯಲ್ಲಿ ನಡೆದಿದ್ದರೂ, ಇತ್ತೀಚೆಗೆ @policerelease ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಇದರ ವಿಡಿಯೋ ವೈರಲ್ ಆಗಿದೆ. ವಿಡಿಯೋದಲ್ಲಿ ವಿಚಾರಣೆ ಸಂದರ್ಭದಲ್ಲಿ ಆಕೆ ಗಾಬರಿಗೊಂಡು, ನರ‍್ವಸ್ ಆಗಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ಆಕೆ ತಾನು ಭಾರತೀಯ ಮೂಲದವಳು ಹಾಗೂ ಮಾತೃಭಾಷೆ ಗುಜರಾತಿ ಎಂದು ಪೊಲೀಸರಿಗೆ ತಿಳಿಸಿದ್ದಾಳೆ.
ಪೊಲೀಸರ ತನಿಖೆಯಲ್ಲಿ, ಆಕೆ ಹಿಂದೆಯೂ ಅನೇಕ ಬಾರಿ ಶಾಪ್‌ಲಿಫ್ಟಿಂಗ್ ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಈ ಬಾರಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳೊಂದಿಗೆ ಸಿಕ್ಕಿಬಿದ್ದಿದ್ದು, ಪೊಲೀಸರು ಶಾಸನಬದ್ಧ ಎಚ್ಚರಿಕೆ (Statutory Warning) ನೀಡಿ ಆಕೆಯನ್ನು ಬಿಡುಗಡೆ ಮಾಡಿದ್ದಾರೆ ಎಂದು ವರದಿಗಳು ಹೇಳುತ್ತವೆ.
ಈ ಘಟನೆ ಅಮೆರಿಕಾದಲ್ಲಿ ಭಾರತೀಯರು ಎದುರಿಸುತ್ತಿರುವ ಸವಾಲುಗಳ ಕುರಿತು ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಈಗ ವ್ಯಾಪಕವಾಗಿ ಹರಿದಾಡುತ್ತಿದೆ.
