Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೆನಡಾದ ಗುಂಡಿನ ಚಕಮಕಿಯಲ್ಲಿ ಭಾರತೀಯ ವಿದ್ಯಾರ್ಥಿನಿ ಸಾವು!

Spread the love

ಕೆನಡಾ : ಕೆನಡಾದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಲುಕಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ..

ಹ್ಯಾಮಿಲ್ಟನ್ ಹರ್ಸಿಮ್ರತ್ ರಾಂಧವ ಅವರು ಬಸ್‌ ನಿಲ್ದಾಣದಲ್ಲಿ ಕಾಯುತ್ತಿದ್ದಾಗ ಎರಡು ವಾಹನಗಳನ್ನು ಒಳಗೊಂಡ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.

ಆ ಗುಂಡು ಅವರಿಗೆ ತಗುಲಿತು ಎಂದು ಹ್ಯಾಮಿಲ್ಟನ್ ಪೊಲೀಸರು ತಿಳಿಸಿದ್ದಾರೆ.

ಒಂಟಾರಿಯೊದ ಹ್ಯಾಮಿಲ್ಟನ್ನಲ್ಲಿರುವ ಮೊಹಾವ್ಕ್ ಕಾಲೇಜಿನ ವಿದ್ಯಾರ್ಥಿನಿ ರಾಂಧವ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಕಳೆದ ನಾಲ್ಕು ತಿಂಗಳಲ್ಲಿ ಕೆನಡಾದಲ್ಲಿ ಸಾವನ್ನಪ್ಪಿದ ನಾಲ್ಕನೇ ಭಾರತೀಯರಾಗಿದ್ದಾರೆ.
ಅಪ್ಪರ್ ಜೇಮ್ಸ್ ಮತ್ತು ಸೌತ್ ಬೆಂಡ್ ರೋಡ್ ಬೀದಿಗಳ ಬಳಿ ಈ ಗುಂಡಿನ ದಾಳಿ ನಡೆದಿದೆ ಎಂದು ಹ್ಯಾಮಿಲ್ಟನ್ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಂಧವ ಅವರ ಎದೆಗೆ ಗುಂಡು ಹಾರಿಸಿದ ಕೂಡಲೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.


Spread the love
Share:

administrator

Leave a Reply

Your email address will not be published. Required fields are marked *