Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಮತಾ ಬ್ಯಾನರ್ಜಿ ನಿಜಕ್ಕೂ ವಕೀಲರೇ? ಬಿಸಿಐನಿಂದ ದಾಖಲೆ ಕೇಳಿ ನೋಟಿಸ್!

Spread the love

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಇಂದು ಕೊಲ್ಕತ್ತಾ ಹೈಕೋರ್ಟ್‌ಗೆ ವಕೀಲರ ಕೋಟ್ ಧರಿಸಿ ಹಾಜರಾಗಿದ್ದರು. ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣವನ್ನು ಅವರು ವಾದಿಸಿದ್ದರು. ಟಿಎಂಸಿಯ ಹಿರಿಯ ನಾಯಕರಾದ ಚಂದ್ರಿಮಾ ಭಟ್ಟಾಚಾರ್ಯ ಮತ್ತು ಕಲ್ಯಾಣ್ ಬ್ಯಾನರ್ಜಿ ಅವರೊಂದಿಗೆ ನ್ಯಾಯಾಲಯಕ್ಕೆ ಆಗಮಿಸಿದ್ದ ಮಮತಾ ಬ್ಯಾನರ್ಜಿ ತಾವೇ ವಾದ ಮಂಡಿಸಿದ್ದರು. ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ವಕೀಲ ವೃತ್ತಿಯಲ್ಲಿ ನಿಜಕ್ಕೂ ಅನುಭವ ಹೊಂದಿದ್ದಾರಾ? ಎಂಬ ಪ್ರಶ್ನೆಗಳು ಮೂಡಿವೆ.
2026ರ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಪಕ್ಷದ ಕಚೇರಿಗಳ ಮೇಲೆ ದಾಳಿ ನಡೆಸಲಾಗಿತ್ತು. ಹಲವಾರು ಟಿಎಂಸಿ ಕಾರ್ಯಕರ್ತರು ಹಿಂಸಾಚಾರವನ್ನು ಎದುರಿಸಿದ್ದರು ಎಂದು ಅರ್ಜಿಯಲ್ಲಿ ಹೈಕೋರ್ಟ್​ಗೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಆರೋಪಿಸಲಾಗಿದೆ. ಟಿಎಂಸಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಕೂಡ ಅರ್ಜಿಯಲ್ಲಿ ಆರೋಪಿಸಲಾಗಿದೆ.ಮೇ 12ರಂದು ಕೊಲ್ಕತ್ತಾ ಹೈಕೋರ್ಟ್‌ಗೆ ಈ ಬಗ್ಗೆ ಅರ್ಜಿ ಸಲ್ಲಿಸಲಾಯಿತು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಮತ್ತು ನ್ಯಾಯಮೂರ್ತಿ ಪಾರ್ಥಸಾರಥಿ ಸೇನ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ಈ ಪ್ರಕರಣದ ವಿಚಾರಣೆ ಇಂದು ನಡೆಯಿತು.ಈ ಪ್ರಕರಣದ ವಿಚಾರಣೆ ಮುಗಿದ ಬಳಿಕ ನ್ಯಾಯಾಲಯದ ಆವರಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರು ಹೈಕೋರ್ಟ್‌ನಿಂದ ಹೊರಬರುತ್ತಿದ್ದಂತೆ, ವಕೀಲರ ಒಂದು ವಿಭಾಗವು ಅವರನ್ನು “ಕಳ್ಳಿ” ಎಂದು ಕರೆದಿದೆ ಎಂದು ಆರೋಪಿಸಲಾಗಿದೆ. ಟಿಎಂಸಿ ಮುಖಂಡರು ಮತ್ತು ವಕೀಲರು ಆಕೆಯನ್ನು ಸುರಕ್ಷಿತವಾಗಿ ಕೋರ್ಟ್ ಆವರಣದಿಂದ ಹೊರತರಲು ಹರಸಾಹಸ ಪಡಬೇಕಾಯಿತು.ಬಾರ್ ಕೌನ್ಸಿಲ್ ಆಫ್ ಇಂಡಿಯಾ ಪಶ್ಚಿಮ ಬಂಗಾಳದ ಬಾರ್ ಕೌನ್ಸಿಲ್‌ಗೆ ಪತ್ರ ಬರೆದಿದ್ದು, ಮಮತಾ ಬ್ಯಾನರ್ಜಿ ಕೊಲ್ಕತ್ತಾ ಹೈಕೋರ್ಟ್‌ನಲ್ಲಿ ವಕೀಲರ ಗೌನ್​​ನಲ್ಲಿ ಕಾಣಿಸಿಕೊಂಡಿದ್ದಕ್ಕೆ ವಿವರ ಕೇಳಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾನೂನು ಅಭ್ಯಾಸದ ದಾಖಲಾತಿ ಮತ್ತು ಪ್ರಾಕ್ಟಿಸ್​​ಗೆ ಸಂಬಂಧಿಸಿದ ದಾಖಲೆಗಳನ್ನು ನೀಡಲು ಬಿಸಿಐ ಕೋರಿದೆ.ಬಾರ್ ಕೌನ್ಸಿಲ್ ಆಫ್ ಇಂಡಿಯಾವು ಮಮತಾ ಬ್ಯಾನರ್ಜಿ ಅವರು ವಕೀಲರಾಗಿ ದಾಖಲಾತಿಯಾಗಿದ್ದು, ಯಾವುದೇ ಅಮಾನತು ಅಥವಾ ಅಭ್ಯಾಸದ ಪುನರಾರಂಭ, ಅವರ ಕಾನೂನು ಅಭ್ಯಾಸದ ಪ್ರಮಾಣಪತ್ರದ ಬಗ್ಗೆ ಮಾಹಿತಿಯನ್ನು ಕೇಳಿದೆ. ಎರಡು ದಿನದೊಳಗೆ ದಾಖಲೆ ನೀಡುವಂತೆ ರಾಜ್ಯ ವಕೀಲರ ಪರಿಷತ್‌ಗೆ ಸೂಚಿಸಲಾಗಿದೆ. ಮಮತಾ ಬ್ಯಾನರ್ಜಿ ಅವರು ವಕೀಲರ ಉಡುಪಿನಲ್ಲಿ ಟಿಎಂಸಿ ಪರ ವಕೀಲರಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಪಶ್ಚಿಮ ಬಂಗಾಳದ ಬಾರ್ ಕೌನ್ಸಿಲ್‌ನಲ್ಲಿ ಹೈಕೋರ್ಟ್ ವಕೀಲರಾಗಿ ನೋಂದಾಯಿಸಿಕೊಂಡಿದ್ದಾರೆಯೇ ಎಂದು ತಿಳಿಯಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ ದಾಖಲೆ ಕೇಳಿದೆ.


Spread the love
Share:

administrator

Leave a Reply

Your email address will not be published. Required fields are marked *