Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಇಸ್ರೇಲ್-ಇರಾನ್ ಸಂಘರ್ಷ ತೀವ್ರ: ಇರಾನ್ ಫೈಟರ್ ಜೆಟ್‌ಗಳು ನಾಶ

Spread the love

ಟೆಹ್ರಾನ್: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ತಾರಕಕ್ಕೇರಿದೆ. ಇರಾನ್‌ನ ಪ್ರಮುಖ 2 ಫೈಟರ್ ಜೆಟ್‌ಗಳನ್ನು ಇಸ್ರೇಲ್ ಹೊಡೆದುರುಳಿಸಿದೆ.

ಟೆಹ್ರಾನ್ ವಿಮಾನ ನಿಲ್ದಾಣದಲ್ಲಿದ್ದ ಅಮೆರಿಕಾ ನಿರ್ಮಿತ ಎಫ್-14 ಯುದ್ಧ ವಿಮಾನಗಳು ಇಸ್ರೇಲ್ ದಾಳಿಗೆ ಛಿದ್ರ ಛಿದ್ರವಾಗಿದೆ. ಅಲ್ಲದೇ ಡ್ರೋನ್‌ಗಳನ್ನು ಹಾರಿಸಲು ಸಜ್ಜಾಗಿದ್ದ ಇರಾನಿನ ಸೈನಿಕರ ಮೇಲೆ ಇಸ್ರೇಲ್ ದಾಳಿ ಮಾಡಿದೆ.

ಇರಾನ್ ರಾಷ್ಟ್ರದ ಮೇಲೆ ಇಸ್ರೇಲ್ ಬಿಗಿ ಹಿಡಿತ ಸಾಧಿಸಲು ಮುಂದಾಗಿದ್ದು, ಟೆಹ್ರಾನ್ ವಾಯುಪ್ರದೇಶವನ್ನು ವಶಕ್ಕೆ ಪಡೆಯಲು ಯತ್ನಿಸುತ್ತಿದೆ. ಇರಾನ್‌ನ 100 ಸ್ಥಳಗಳನ್ನ ಗುರಿಯಾಗಿಸಿ ಇಸ್ರೇಲ್ ಏರ್‌ಸ್ಟ್ರೈಕ್‌ ಮಾಡಿದ್ದು, ಈಗಾಗಲೇ ಇಸ್ರೇಲ್ 120ಕ್ಕೂ ಹೆಚ್ಚು ಇರಾನ್ ಮಿಸೈಲ್‌ಗಳನ್ನು ನಾಶಪಡಿಸಿದೆ ಎಂದು ವರದಿಯಾಗಿದೆ. 

ಇಸ್ರೇಲ್, ಇರಾನ್ ಮೇಲಿನ ದಾಳಿಯನ್ನು ತೀವ್ರಗೊಳಿಸಿದೆ. ಇಸ್ರೇಲ್‌ನ ಐರನ್ ಡೋಮ್, ಥಾಡ್ ಏರ್ ಡಿಫೆನ್ಸ್ ಸಿಸ್ಟಂ ಆಕ್ಟೀವ್ ಆಗಿವೆ. ಇರಾನ್‌ನ ವಿಶ್ವದ ಅತಿದೊಡ್ಡ ಅನಿಲ ಸಂಗ್ರಹಾಗಾರದ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ ನಡೆಸಿದೆ. ಇಸ್ರೇಲ್ ದಾಳಿಗೆ ಈವರೆಗೆ 200ಕ್ಕೂ ಹೆಚ್ಚು ಇರಾನ್ ನಾಗರಿಕರು ಬಲಿಯಾಗಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *