Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜಮ್ಮು ಮತ್ತು ಕಾಶ್ಮೀರ: ಸಿಐಎಸ್‌ಎಫ್ ಯೋಧನಿಂದ ಮನಬಂದಂತೆ ಗುಂಡಿನ ದಾಳಿ – ಅಧಿಕಾರಿ ಸೇರಿ ನಾಲ್ವರು ಸಹೋದ್ಯೋಗಿಗಳ ಹ*ತ್ಯೆ!

Spread the love

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (CISF) ಹೆಡ್ ಕಾನ್‌ಸ್ಟೆಬಲ್ ಒಬ್ಬ ಮನಬಂದಂತೆ ಗುಂಡು ಹಾರಿಸಿ ಒಬ್ಬ ಹಿರಿಯ ಅಧಿಕಾರಿ ಸೇರಿದಂತೆ ನಾಲ್ವರು ಸಿಬ್ಬಂದಿಯನ್ನು ಹತ್ಯೆ ಮಾಡಿದ ಘಟನೆ  ನಡೆದಿದೆ.ಬಸೋಹ್ಲಿಯ ಮಾಷ್ಕಾ ಗ್ರಾಮದಲ್ಲಿರುವ ರಾವಿ ನದಿಯ ಉಪನದಿಯಾದ ಸೇವಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ‘ಸೇವಾ ಜಲವಿದ್ಯುತ್ ಯೋಜನೆ’ ಘಟಕದಲ್ಲಿ ನಿಯೋಜನೆಗೊಂಡಿದ್ದ ಸಿಐಎಸ್‌ಎಫ್ ತುಕಡಿಯಲ್ಲಿ ಮಂಗಳವಾರ ಸಂಜೆ ಸುಮಾರು 6:40 ರ ವೇಳೆಗೆ ಈ ಘಟನೆ ನಡೆದಿದೆ. ಸಿಬ್ಬಂದಿ ನಡುವೆ ನಡೆದ ತೀವ್ರ ವಾಗ್ವಾದವೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.ಘಟನೆಯಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಅಂಕಿತ್ ಕುಮಾರ್ ಪಾಂಡೆ, ಸಬ್‌-ಇನ್‌ಸ್ಪೆಕ್ಟರ್ ಲಕ್ಷ್ಮಣ್ ಸಿಂಗ್, ಕಾನ್‌ಸ್ಟೆಬಲ್ ರಫೀಕ್ ಅಹ್ಮದ್ ಹಾಗೂ ಕಾನ್‌ಸ್ಟೆಬಲ್ ಸಂದೀಪ್ ಕುಮಾರ್ ಮೃತಪಟ್ಟಿದ್ದಾರೆ.ಆರೋಪಿ ಹೆಡ್ ಕಾನ್‌ಸ್ಟೆಬಲ್ ಅವದೇಶ್ ಕುಮಾರ್ ಸಿಂಗ್ ತನಗೆ ನೀಡಲಾಗಿದ್ದ ಎಕೆ-47 ರೈಫಲ್‌ನೊಂದಿಗೆ ಕಚೇರಿಯ ಆವರಣಕ್ಕೆ ನುಗ್ಗಿ ಏಕಾಏಕಿ ಸಹೋದ್ಯೋಗಿಗಳ ಮೇಲೆ ಗುಂಡಿನ ಮಳೆಗರೆದಿದ್ದಾನೆ. ಆತನ ಬಳಿ ಬರೋಬ್ಬರಿ 150 ಸುತ್ತು ಗುಂಡುಗಳಿದ್ದವು ಎಂದು ಸಿಐಎಸ್‌ಎಫ್ ಮೂಲಗಳು ತಿಳಿಸಿವೆ.ಗುಂಡೇಟಿನಿಂದ ತೀವ್ರವಾಗಿ ರಕ್ತಸ್ರಾವಗೊಂಡು ಗಾಯಗೊಂಡಿದ್ದ ನಾಲ್ವರನ್ನು ತಕ್ಷಣವೇ ಹಿಮಾಚಲ ಪ್ರದೇಶದ ಎನ್‌ಎಚ್‌ಪಿಸಿ (NHPC) ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಪ್ರದೇಶವನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿ ಅವದೇಶ್ ಕುಮಾರ್ ಸಿಂಗ್‌ನನ್ನು ಬಂಧಿಸಲಾಗಿದ್ದು, ಪೊಲೀಸರಿಗೆ ಒಪ್ಪಿಸಲಾಗಿದೆ. ಗುಂಡಿನ ದಾಳಿಗೆ ನಿಖರ ಕಾರಣವೇನು ಎಂಬ ಕುರಿತು ಹಿರಿಯ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *