Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಡಬದಲ್ಲಿ ಭೀಕರ ರಸ್ತೆ ಅಪಘಾತ; ಕಾರು ಡಿಕ್ಕಿಗೆ ಸ್ಕೂಟರ್ ಸವಾರ 31 ವರ್ಷದ ಯುವಕ ಬಲಿ!

Spread the love

ಕಡಬ :  ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟಿರುವ ದಾರುಣ ಘಟನೆ ಕಡಬ ತಾಲ್ಲೂಕಿನ ಬಿಳಿನೆಲೆ ಗ್ರಾಮದ ಕೋಟೆ ಹೊಳೆ ಸೇತುವೆ ಬಳಿ ಶುಕ್ರವಾರ (ನ. 27) ನಡೆದಿದೆ.

ಸೋಮವಾರಪೇಟೆ ಪಟ್ಟಣದ ಸಮೀಪದ ಕಲ್ಕಂದೂರು ನಿವಾಸಿ ಕೃಷ್ಣಪ್ಪ ಅವರ ಪುತ್ರ ವಿಶ್ವಾಸ್ (31) ಮೃತಪಟ್ಟ ದುರ್ದೈವಿ. ಇವರು ಮಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದರು.
ಶುಕ್ರವಾರ ಬೆಳಿಗ್ಗೆ ವಿಶ್ವಾಸ್ ಅವರು ತಮ್ಮ ಸ್ಕೂಟರ್‌ನಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ, ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ಬರುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ನಂದನ್ ಎಂಬಾತ ಕಾರು ಚಲಾಯಿಸುತ್ತಿದ್ದು, ಆತನ ಅಜಾಗರೂಕತೆ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟ್ಟ ವಿಶ್ವಾಸ್ ತೀವ್ರವಾಗಿ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು ಚಿಕಿತ್ಸೆಗಾಗಿ ಕಡಬದ ಆಸ್ಪತ್ರೆಗೆ ಕರೆದೊಯ್ದರಾದರೂ, ಪರೀಕ್ಷಿಸಿದ ವೈದ್ಯರು ವಿಶ್ವಾಸ್ ಅದಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು. ಘಟನೆ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *