Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು: ಇಸ್ರೇಲ್‌ನಲ್ಲಿ ಕಣ್ಣೂರು ಮೂಲದ ವ್ಯಕ್ತಿ ನಿಗೂಢ ಸಾ*ವು – ಒಂದು ತಿಂಗಳ ಬಳಿಕ ಮೃತದೇಹ ತಾಯ್ನಾಡಿಗೆ, ಕೊ*ಲೆ ಶಂಕೆ!”

Spread the love

ಮಂಗಳೂರು: ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ವ್ಯಕ್ತಿಯೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಾವಿನ ಹಿಂದೆ ಕೊಲೆ ಶಂಕೆ ವ್ಯಕ್ತಪಡಿಸಿರುವ ಕುಟುಂಬಸ್ಥರು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಮಂಗಳೂರಿನ ಪಡೀಲ್ ಸಮೀಪದ ಕಣ್ಣೂರು ಕೊಡಕ್ಕಲ್ ನಿವಾಸಿ ಶಡ್ರಕ್ ಇಮ್ಯಾನುವೆಲ್ (41) ಮೃತಪಟ್ಟವರು.

ಒಂದೂವರೆ ವರ್ಷದಿಂದ ಇಸ್ರೇಲ್‌ನಲ್ಲಿ ಉದ್ಯೋಗ ಮಾಡುತ್ತಿದ್ದ ಶಡ್ರಕ್, ಮೊದಲು ಟೆಲ್ ಅವೀವ್‌ನ ಇಸ್ರೇಲಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ಇಸ್ರೇಲ್‌ನ ನಝರೆತ್ ಸಮೀಪದ ನೊಫ್ ಹಗಲಿಲ್‌ನಲ್ಲಿರುವ ಯುಸಿಟಿ ಲಿಕ್ವಿಡ್ ಸೊಲ್ಯೂಷನ್ ಕಂಪನಿಯಲ್ಲಿ ಉದ್ಯೋಗಕ್ಕೆ ಸೇರಿದ್ದರು.

ಅಕ್ಟೋಬರ್ 16ರಂದು ರಾತ್ರಿ 8.49ಕ್ಕೆ ಶಡ್ರಕ್ ತಮ್ಮ ಪತ್ನಿಗೆ ಕೊನೆಯದಾಗಿ ಸಂದೇಶ ಕಳುಹಿಸಿದ್ದರು. ಅದಕ್ಕೂ ಮೊದಲು ಮನೆಯವರೊಂದಿಗೆ ವೀಡಿಯೋ ಕರೆ ಮೂಲಕ ಮಾತನಾಡಿದ್ದರು. ಆ ಬಳಿಕದಿಂದ ಅವರು ಕುಟುಂಬಸ್ಥರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಅವರ ಮೊಬೈಲ್ ಕೂಡ ಸಂಪರ್ಕಕ್ಕೆ ಲಭ್ಯವಾಗಿರಲಿಲ್ಲ.

ಶಡ್ರಕ್ ನಾಪತ್ತೆಯಾಗಿರುವ ಬಗ್ಗೆ ಆತಂಕಗೊಂಡ ಕುಟುಂಬಸ್ಥರು ಅಕ್ಟೋಬರ್ 21ರಂದು ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದರು. ಅಲ್ಲದೆ, ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಸಂಸದ ಬ್ರಿಜೇಶ್ ಚೌಟ ಹಾಗೂ ಸಚಿವ ಯು.ಟಿ. ಖಾದರ್ ಅವರಿಗೂ ದೂರು ನೀಡಿ ಶಡ್ರಕ್ ಅವರನ್ನು ಪತ್ತೆಹಚ್ಚಲು ನೆರವಾಗುವಂತೆ ಮನವಿ ಮಾಡಿದ್ದರು.

ಶಡ್ರಕ್ ನಾಪತ್ತೆಯಾದ ಸುಮಾರು ಒಂದು ವಾರದ ಬಳಿಕ ಅವರು ಮೃತಪಟ್ಟಿರುವ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ಲಭಿಸಿತ್ತು. ಇದೀಗ ಬರೋಬ್ಬರಿ ಒಂದು ತಿಂಗಳ ಬಳಿಕ ಅವರ ಮೃತದೇಹವನ್ನು ಭಾರತಕ್ಕೆ ರವಾನಿಸಲಾಗಿದ್ದು, ನಿನ್ನೆ ರಾತ್ರಿ ತಾಯ್ನಾಡಿಗೆ ತಲುಪಿದೆ.

ವಿದೇಶದಲ್ಲಿ ಉದ್ಯೋಗಕ್ಕಾಗಿ ತೆರಳಿದ್ದ ಶಡ್ರಕ್ ನಿಗೂಢ ಸಾವಿನಿಂದ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ. ಸಾವಿನ ಸುತ್ತ ಹಲವು ಅನುಮಾನಗಳಿದ್ದು, ಇದು ಸಹಜ ಸಾವಲ್ಲ, ಕೊಲೆ ನಡೆದಿರುವ ಸಾಧ್ಯತೆಯಿದೆ ಎಂದು ಶಂಕಿಸಿರುವ ಕುಟುಂಬಸ್ಥರು, ಇಸ್ರೇಲ್‌ನಲ್ಲಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಸಾವಿನ ಹಿಂದಿನ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *