ಕನ್ಯಾಡಿ ಕ್ಷೇತ್ರದ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗೆ ಮಹಾ ಗೌರವ..! ಜುನಾ ಅಖಾಡದಿಂದ ಮಹಾ ಮಂಡಲೇಶ್ವರ ಪಟ್ಟಾಭಿಷೇಕ

ಭಾರತದ ನಾಗಾ ಸಾಧು ಸನ್ಯಾಸಿ ಪರಂಪರೆಯಲ್ಲಿ ಕರ್ನಾಟಕದ ಮೊದಲ ಮಹಾ ಮಂಡಲೇಶ್ವರರಾಗಿ ಕನ್ಯಾಡಿಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪಟ್ಟಾಭಿಶಿಕ್ತರಾಗಿದ್ದಾರೆ.
ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಜುನಾ ಅಖಾಡದ ಆಚಾರ್ಯರಾದ ಅವದೇಶಾನಂದ ಗಿರಿ ಮಹಾರಾಜರು ಕನ್ಯಾಡಿಯ ಸ್ವಾಮೀಜಿಯವರಿಗೆ ಪಟ್ಟಾಭಿಷೇಕ ನೆರವೇರಿಸಿದರು.

ಕನ್ಯಾಡಿ ಶ್ರೀರಾಮಕ್ಷೇತ್ರದ ಶ್ರೀಗಳ ಮೂಲಕ ಕರ್ನಾಟಕಕ್ಕೆ ಬರುವ ಪ್ರಪ್ರಥಮ ಮಹಾಮಂಡಲೇಶ್ವರ ಪದವಿಯಾಗಿದೆ. ಈ ಪಟ್ಟಾಭಿಷೇಕರಾದವರಿಗೆ ಧಾರ್ಮಿಕ ಪುರುಷನಿಗೆ ರಾಷ್ಟ್ರಾದ್ಯಂತ ವಿಶೇಷ ಸೌಲಭ್ಯ ನೀಡಲಾಗುತ್ತದೆ. ಅಲ್ಲದೆ ಕನ್ಯಾಡಿ ಶ್ರೀಗಳು ಮುಂದೆ ರಾಷ್ಟ್ರಾದ್ಯಂತ ಧರ್ಮ ಪ್ರಚಾರದ ಜತೆಗೆ ಆಧ್ಯಾತ್ಮದ ಉನ್ನತ ಸಾಧನೆಗಾಗಿ ಧಾರ್ಮಿಕ ಮೌಲ್ಯಗಳನ್ನು ಮತ್ತಷ್ಟು ಬಲಿಷ್ಠಗೊಳಿಸಲು ಅರ್ಹತೆಯುಳ್ಳವರಾಗಿದ್ದಾರೆಂದು ಪರಿಗಣಿಸಿ ನಾಗಾ ಸಾದು ಸನ್ಯಾಸಿ ಪರಂಪರೆಯಲ್ಲಿ ಜುನಾ ಅಖಾಡ ಈ ಜವಾಬ್ದಾರಿಯನ್ನು ನೀಡಿದೆ.
