Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

“ರಾಜ್ಯದಲ್ಲಿ ವಾಯು ಮಾಲಿನ್ಯ ಭೀತಿ: ಮಂಗಳೂರು, ಉಡುಪಿ ಗಾಳಿ ಗುಣಮಟ್ಟ ಕಳಪೆ”

Spread the love

ಬೆಂಗಳೂರು : ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 124ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಮಂಗಳೂರಿನ ಏರ್ ಕ್ವಾಲಿಟಿ 198 ಆಗಿದೆ. ಹಲವು ದಿನಗಳಿಂದ ವಿಪರೀತ ಏರಿಕೆ ಕಾಣುತ್ತಿರುವ ಮಂಗಳೂರಿನ ಏರ್ ಕ್ವಾಲಿಟಿ ಇಂದು 200ರ ಗಡಿ ತಲುಪಿರುವುದು ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.

ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)

  • ಬೆಂಗಳೂರು –124
  • ಮಂಗಳೂರು-198
  • ಮೈಸೂರು –144
  • ಬೆಳಗಾವಿ – 167
  • ಕಲಬುರ್ಗಿ-129
  • ಶಿವಮೊಗ್ಗ – 136
  • ಬಳ್ಳಾರಿ – 130
  • ಹುಬ್ಬಳ್ಳಿ- 152
  • ಉಡುಪಿ –170
  • ವಿಜಯಪುರ –119

Spread the love
Share:

administrator

Leave a Reply

Your email address will not be published. Required fields are marked *