Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾಸರಗೋಡು: ಓಣಂ ಕಾರ್ಯಕ್ರಮ ಮುಗಿಸಿ ಆಟೋದಲ್ಲಿ ಮನೆಗೆ ತೆರಳುತ್ತಿದ್ದ 14 ವರ್ಷದ ಬಾಲಕಿ ಮೇಲೆ ಅತ್ಯಾಚಾ*ರ!

Spread the love

ಕಾಸರಗೋಡು : ಓಣಂ ಆಚರಣೆಯ ಕಾರ್ಯಕ್ರಮ ಮುಗಿಸಿಕೊಂಡು ಆಟೋರಿಕ್ಷಾದಲ್ಲಿ ಮನೆಗೆ ಹಿಂತಿರುಗುತ್ತಿದ್ದ 14 ವರ್ಷದ ಬಾಲಕಿಯ ಮೇಲೆ ಆಟೋ ಚಾಲಕ ಅತ್ಯಾಚಾರ ಎಸಗಿರುವ ಘಟನೆ ಕಾಸರಗೋಡಿನ ಚೀಮೇನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ನಂಜಾಡಿ ಗ್ರಾಮದ ಶಾಜಿ (30) ಎಂಬಾತನನ್ನು ಚೀಮೇನಿ ಪೊಲೀಸರು ಬಂಧಿಸಿದ್ದು, ಆರೋಪಿಯನ್ನು ಶುಕ್ರವಾರ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ ಎಂದು ವೆಳ್ಳರಿಕುಂಡು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.

ಚೀಮೇನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ ಓಣಂ ಆಚರಣೆ ಕಾರ್ಯಕ್ರಮದಲ್ಲಿ ಬಾಲಕಿ ಭಾಗವಹಿಸಿದ್ದಳು. ಕಾರ್ಯಕ್ರಮ ಮುಗಿದ ಬಳಿಕ ರಾತ್ರಿ ಮನೆಗೆ ಹಿಂತಿರುಗಲು ಆಟೋರಿಕ್ಷಾ ಏರಿದ್ದಾಗ, ಪ್ರಯಾಣದ ಮಧ್ಯೆ ಚಾಲಕ ಶಾಜಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆಯ ಬಳಿಕ ಮನೆಗೆ ಬಂದ ಬಾಲಕಿಯ ದೈಹಿಕ ಸ್ಥಿತಿ ಗಮನಿಸಿದ ಕುಟುಂಬಸ್ಥರು, ಅನುಮಾನಗೊಂಡು ವಿಚಾರಿಸಿದಾಗ ಈ ಘೋರ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣವೇ ಬಾಲಕಿಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

ಆರೋಪಿ ಶಾಜಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಲಾದ ಆರೋಪಿಯನ್ನು ಸೆಪ್ಟೆಂಬರ್ 10ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *