Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾಸರಗೋಡು: ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದ ಕೆಎಸ್‌ಆರ್‌ಟಿಸಿ ತಾತ್ಕಾಲಿಕ ಕಂಡಕ್ಟರ್ ಆತ್ಮಹ*ತ್ಯೆ!

Spread the love

ಕಾಸರಗೋಡು: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್ಸಾರ್ಟಿಸಿ) ತಾತ್ಕಾಲಿಕ ಕಂಡಕ್ಟರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಸರಗೋಡಿನ ಮುಳಿಯಾರ್‌ನಲ್ಲಿ ನಡೆದಿದೆ.
ಮುಳಿಯಾರ್ ಮಜಕ್ಕಾರ್ ನಿವಾಸಿ ಯೋಗೀಶ್ ಎಂ. (41) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಕಳೆದ 18 ವರ್ಷಗಳಿಂದ ಕೆಎಸ್‌ಆರ್‌ಟಿಸಿ ಸಂಸ್ಥೆಯಲ್ಲಿ ತಾತ್ಕಾಲಿಕ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಕಳೆದ ಕೆಲವು ದಿನಗಳಿಂದ ತಮ್ಮ ಉದ್ಯೋಗ ಕೈತಪ್ಪಬಹುದು ಎಂಬ ತೀವ್ರ ಭೀತಿಯಲ್ಲಿದ್ದ ಯೋಗೀಶ್, ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಈ ಆತಂಕದಿಂದಾಗಿಯೇ ಅವರು ತಮ್ಮ ಮನೆಯ ಸಮೀಪದ ಶೆಡ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ತಾಯಿ ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *