ಕಾಸರಗೋಡು: ಕಾರು ಢಿಕ್ಕಿ ಹೊಡೆದು ಪಾದಚಾರಿ ಸಾವು

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಸೋಮವಾರ ರಾತ್ರಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ವಾಮಂಜೂರು ಕಜೆ ನಿವಾಸಿ ಮುಹಮ್ಮದ್ ಸಾದಿಕ್ (40) ಎಂಬುವವರು ಮೃತಪಟ್ಟಿದ್ದಾರೆ.

ಸೋಮವಾರ ರಾತ್ರಿ ಮಂಜೇಶ್ವರ ಹೊಸಬೆಟ್ಟು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಾದಿಕ್‌ರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಈ ಘಟನೆ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.