Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾಪು: ಗೂಡ್ಸ್ ವಾಹನದಲ್ಲಿ ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ಕರೆದೊಯ್ದ ವೀಡಿಯೊ ವೈರಲ್ – ವಾಹನ ವಶಕ್ಕೆ ಪಡೆದ ಪೊಲೀಸರು!

Spread the love

ಕಾಪು :  ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಅಂಡರ್ ಪಾಸ್ ಬಳಿ ಗೂಡ್ಸ್ ವಾಹನವೊಂದರಲ್ಲಿ ಮಕ್ಕಳನ್ನು ಅತ್ಯಂತ ಅಪಾಯಕಾರಿ ರೀತಿಯಲ್ಲಿ ಕರೆದೊಯ್ಯುತ್ತಿದ್ದ ವಾಹನವನ್ನು ಕಾಪು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಪೊಲೀಸರು ಸ್ವಯಂಪ್ರೇರಿತ ಕ್ರಮ ಕೈಗೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್: ಬುಧವಾರ (ಸೆ. 10) ಸಂಜೆ ವೇಳೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಗೂಡ್ಸ್ ವಾಹನದ ಚಾಲಕನು, ವಾಹನದ ಪರವಾನಗಿ ನಿಯಮಗಳನ್ನು ಗಾಳಿಗೆ ತೂರಿದ್ದ. ವಾಹನದ ಹಿಂಭಾಗದ ಓಪನ್ ಬಾಡಿಯಲ್ಲಿ ಸುಮಾರು 8 ರಿಂದ 10 ಸಣ್ಣ ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ನಿಲ್ಲಿಸಿಕೊಂಡು ಅತಿವೇಗವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದ. ಇದನ್ನು ಗಮನಿಸಿದ ಹಿಂಬದಿ ವಾಹನ ಸವಾರರು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದರು. ಇದು ಸಂಚಾರ ನಿಯಮ ಉಲ್ಲಂಘನೆ ಮಾತ್ರವಲ್ಲದೆ ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡುವ ಕೃತ್ಯವೆಂದು ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

ಪ್ರಕರಣ ದಾಖಲು – ವಾಹನ ಜಪ್ತಿ: ವಿಡಿಯೋ ಸುಳಿವು ಆಧರಿಸಿ ತಕ್ಷಣ ಕಾರ್ಯಪ್ರವೃತ್ತರಾದ ಕಾಪು ಪೊಲೀಸ್ ಠಾಣೆಯ ಅಧಿಕಾರಿಗಳು, ಶುಕ್ರವಾರ (ಸೆ. 11) ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯಕ್ಕೆ ಬಳಸಲಾದ ಗೂಡ್ಸ್ ವಾಹನವನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿರುವ ಪೊಲೀಸರು, ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸಿ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *