Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೇರಳ – ಮದುವೆ ಹಿಂದಿನ ದಿನ ನೇಣಿಗೆ ಶರಣಾದ ಯುವತಿ.

Spread the love

ಕೇರಳ ಫೆಬ್ರವರಿ 05: ಮದುವೆಯ ಹಿಂದಿನ ದಿನವೇ ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಶೈಮಾ ಸಿನಿವರ್(18) ಎಂದು ಗುರುತಿಸಲಾಗಿದೆ. ಯುವತಿ ಸಾವನಪ್ಪಿದ ಬೆನ್ನಲ್ಲೇ ಆಕೆಯ ಪ್ರಿಯಕರ ಕೂಡ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಶೈಮಾ ಸಿನಿವರ್ ತಂದೆ ತೀರಿಕೊಂಡಿದ್ದು, ತನ್ನಸಂಬಂಧಿಗರ ಮನೆಯಲ್ಲಿ ವಾಸವಿದ್ದಳು. ಈ ನಡುವೆ ಮನೆಯ ಪಕ್ಕದಲ್ಲೇ ಇದ್ದ ಯುವಕ ಸಜೀರ್ ಎಂಬಾತನನ್ನು ಪ್ರೀತಿಸುತ್ತಿದ್ದರು. ಆದರೆ ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬಸ್ಥರು ಬೇರೆ ಯುವಕನ ಜೊತೆ ಆಕೆಗೆ ವಿವಾಹವನ್ನು ನಿಗದಿಪಡಿಸಿದ್ದು, ನಿಶ್ಚಿತಾರ್ಥವೂ ನಡೆದಿತ್ತು. ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿ ಶೈಮಾ ತಾನು ಸಜೀರ್ ಎಂಬಾತನನ್ನು ಪ್ರೀತಿಸುತ್ತಿದ್ದ ಬಗ್ಗೆ ಕುಟುಂಬಸ್ಥರಲ್ಲಿ ಹೇಳಿಕೊಂಡಿದ್ದಳು. ಆದರೆ ಕುಟುಂಬವು ಇದಕ್ಕೆ ನಿರಾಕರಿಸಿತ್ತು.

ಈ ಹಿನ್ನಲೆ ಮದುವೆ ಹಿಂದಿನ ದಿನ ನೇಣಿ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿ ಆತ್ಮಹತ್ಯೆ ವಿಷಯ ತಿಳಿದು ಯುವತ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *