ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಕೆಎನ್ ರಾಜಣ್ಣ ರಾಜೀನಾಮೆ?

ಬೆಂಗಳೂರು: ಸಚಿವ ಸ್ಥಾನಕ್ಕೆ ಸಹಕಾರಿ ಸಚಿವ ರಾಜಣ್ಣ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೈಕಮಾಂಡ್ ಸೂಚನೆಯ ಬೆನ್ನಲ್ಲೇ ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.

ಆರಂಭದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಹೇಳಿಕೆ ನೀಡಿ ರಾಜಣ್ಣ ಸಂಚಲನ ಮೂಡಿಸಿದ್ದರು. ರಾಹುಲ್ ಗಾಂಧಿ ಮತಗಳ್ಳತನ ಆರೋಪ ಮಾಡಿದ ನಂತರ ರಾಜಣ್ಣ ನಮ್ಮ ಅವಧಿಯಲ್ಲಿ ಮತಪಟ್ಟಿ ಸಿದ್ಧವಾಗಿತ್ತು ಎಂದು ಹೇಳಿದ್ದರು.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಮತದಾರರ ಪಟ್ಟಿ ಸಿದ್ಧಪಡಿಸಲಾಗಿದೆ. ಆಗ ಎಲ್ಲರು ಕಣ್ಣುಮುಚ್ಚಿ ಕುಳಿತಿದ್ದರೇ ಎಂದು ರಾಜಣ್ಣ ಪ್ರಶ್ನಿಸಿದ್ದರು. ರಾಜಣ್ಣ ಅವರ ಈ ಹೇಳಿಕೆ ಕಾಂಗ್ರೆಸ್ ಮುಜುಗರ ತಂದಿತ್ತು. ಈ ಹೇಳಿಕೆಯ ನಂತರ ಹೈಕಮಾಂಡ್ ರಾಜಣ್ಣಗೆ ರಾಜೀನಾಮೆ ಸಲ್ಲಿಸಲು ಸೂಚನೆ ನೀಡಿತ್ತು.
