ಕೊಡಗು: ಡೆತ್ ನೋಟ್ ಬರೆದಿಟ್ಟು 19 ವರ್ಷದ ವಿದ್ಯಾರ್ಥಿನಿ ನೇಣುಬಿಗಿದುಕೊಂಡ ದುರ್ಘಟನೆ

ಕೊಡಗು : ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.
ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಆತ್ಮಹತ್ಯೆ ಶರಣಾಗಿದ್ದಾರೆ.
ಪೊನ್ನ ಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಡೆತ್ ನೋಟ್ ಪತ್ತೆಯಾಗಿ ಆರು ಬ್ಯಾಕ್ ಲಾಗ್ ಇರುವ ಕಾರಣ, ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾಳೆ ಪೊಲೀಸರು ಮಾಹಿತಿ ನೀಡಿದ್ದಾರೆ.
ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡದ್ದಾಳೆ.
ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೂ ಹುಟ್ಟು ಹಬ್ಬದ ನಿಮಿತ, ಸ್ನೇಹಿತರಿಗೆ ಸಿಹಿ ಹಂಚಿದ್ದಾಳೆ. ತರಗತಿಗೆ ಆಗಮಿಸಿದ ನಂತರ ನಿನ್ನೆ ಸಂಜೆ 4 ಗಂಟೆಗೆ ಹಾಸ್ಟೆಲ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ನೇಹಿತರು ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.