Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೋಟ ಪೊಲೀಸರ ಯಶಸ್ವಿ ಕಾರ್ಯಾಚರಣೆ: 1.45 ಲಕ್ಷ ಮೌಲ್ಯದ ಚಿನ್ನದ ಸರ ಕಳ್ಳತನ ಮಾಡಿದ್ದ ಆರೋಪಿ ಬಂಧನ, ಚಿನ್ನ ವಶ

Spread the love

ಕೋಟ: ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಆರೋಪಿಯನ್ನು ಕೋಟ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ಆನಂದ (26) ಎಂದು ಗುರುತಿಸಲಾಗಿದೆ.

ಆರೋಪಿಯು ಕುಂದಾಪುರ ತಾಲೂಕಿನ ಗುಡ್ಡೆ ಅಂಗಡಿಯ ಮನೆಯೊಂದಕ್ಕೆ ನುಗ್ಗಿ ಸುಮಾರು 18 ಗ್ರಾಂ ತೂಕದ ಅಂದಾಜು 1,45,000 ರೂ. ಮೌಲ್ಯದ ಚಿನ್ನದ ಸರ ಕಳ್ಳತನ ಮಾಡಿರುವುದಾಗಿ ಬಸವ ಪೂಜಾರಿ (72) ಎಂಬವರು ನೀಡಿದ ದೂರಿನಂತೆ ಕೋಟ ಪೋಲಿಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 176/2025 0 331(4), 305 2.2.2 ರಂತೆ ಪ್ರಕರಣ ದಾಖಲಾಗಿದೆ.

ಕೋಟ ಪೊಲೀಸ್ ಠಾಣೆಯ ಉಪನಿರೀಕ್ಷಕ ಪ್ರವೀಣ ಕುಮಾ‌ರ್ ಆರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಳ್ಳನನ್ನು ಬಂಧಿಸಿ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *