Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೋಲಾರ: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ರಸ್ತೆ ಅಪಘಾತ – ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ದಾರುಣ ಸಾ*ವು!

Spread the love

ಕೋಲಾರ : ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್ ಕಾರಿಡಾರ್ ರಸ್ತೆಯಲ್ಲಿ ಗುರುವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಹಲವು ಬಾರಿ ಪಲ್ಟಿಯಾಗಿ ಬಿದ್ದ ಪರಿಣಾಮ ನಾಲ್ವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಗಾರಪೇಟೆ ತಾಲ್ಲೂಕಿನ ಮರಗಲ್ ಬಳಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನವನೀತ್ ಗಾಯಾಕ್ವಾಡ್, ಪವಾರ್ ವಿಶ್ವನಾಥ್ ದಿಗಂಬರ, ಕಿರಣ್ ಹಾಗೂ ವಿಶಾಲ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಸೋಮನಾಥ್ ಕೊಲ್ಲಿ ಎಂಬುವವರು ತೀವ್ರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದರು. ಮರಗಲ್ ಸಮೀಪದ ಎಕ್ಸ್‌ಪ್ರೆಸ್ ಕಾರಿಡಾರ್ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಕಾರು ರಸ್ತೆಯಲ್ಲೇ ಹಲವು ಬಾರಿ ಪಲ್ಟಿ ಹೊಡೆದು ಸುಮಾರು 200 ಮೀಟರ್‌ಗಳಷ್ಟು ದೂರಕ್ಕೆ ಉರುಳಿ ಬಿದ್ದಿದೆ. ಪರಿಣಾಮ ನಾಲ್ವರು ಪ್ರಯಾಣಿಕರು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕೋಲಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶಿವಂಶು ರಜಪೂತ್, ಡಿವೈಎಸ್‌ಪಿ ಲಕ್ಷಯ್ಯ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ರವಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ರಸ್ತೆಯ ತಿರುವಿನಲ್ಲಿ ಅತಿ ವೇಗವಾಗಿ ಚಲಾಯಿಸಿದ್ದೇ ಅಪಘಾತಕ್ಕೆ ಮುಖ್ಯ ಕಾರಣ ಎನ್ನಲಾಗಿದ್ದು, ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಘಟನೆ ಸಂಬಂಧ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *