Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೊಣಾಜೆ: ಪೊಳಲಿ ಜಾತ್ರೆಗೆಂದು ತೆರಳಿದ್ದ 10ನೇ ತರಗತಿ ವಿದ್ಯಾರ್ಥಿನಿ ನಾಪತ್ತೆ; ಆತಂಕದಲ್ಲಿ ಪೋಷಕರು

Spread the love

ಕೊಣಾಜೆ : ಎಪ್ರಿಲ್ 12 ರಂದು ಪ್ರೆಂಡ್ಸ್ ಜೊತೆ ಪೊಳಲಿ ಜಾತ್ರೆಗೆ ತೆರಳಿದ್ದ ಬಾಲಕಿ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದು, ಕೊಣಾಜೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.
ಪಜೀರು ಅಡ್ಕದ ಜಗದೀಶ್ ಎಂಬವರ ಪುತ್ರಿ ಚೈತನ್ಯ (16) ಎಂಬಾಕೆ ನಾಪತ್ತೆಯಾದ ಬಾಲಕಿ.

ಈಕೆ ಹರೇಕಳ ರಾಮಕೃಷ್ಣ ಹೈಸ್ಕೂಲ್ ನಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದು, ಪರೀಕ್ಷೆ ಮುಗಿಸಿ ಮನೆಯಲ್ಲಿ ಇದ್ದಳು. ಎ.12 ರಂದು ಬೆಳಿಗ್ಗೆ ಮನೆಯಲ್ಲಿ ಗೆಳೆಯರೊಂದಿಗೆ ಪೊಳಲಿ ಜಾತ್ರೆಗೆಂದು ತೆರಳಿದ್ದು, ಬಳಿಕ ರಾತ್ರಿಯವರೆಗೂ ಮನೆಗೆ ಬಾರದೆ ಇದ್ದುದರಿಂದ ಮನೆಯವರು ಆತಂಕಗೊಂಡು ಗೆಳೆಯರು ಹಾಗೂ ಸಂಬಂಧಿಕರ ಮನೆಯಲ್ಲಿ ಹುಡುಕಾಡಿದರೂ ಬಾಲಕಿ ಪತ್ತೆಯಾಗಿರಲಿಲ್ಲ. ಬಳಿಕ ಮನೆಯವರು ಕೊಣಾಜೆ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *