Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೊಪ್ಪಳದಲ್ಲಿ ಪರೀಕ್ಷೆಗೆ ಹೋಗಲು ಬಸ್ ನಿಲ್ಲಿಸದ ಸಿಬ್ಬಂದಿ ವಿರುದ್ಧ ವಿದ್ಯಾರ್ಥಿನಿಯ ದಿಟ್ಟ ಪ್ರತಿಭಟನೆ!

Spread the love

ಕೊಪ್ಪಳ: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯದೆ ಬಸ್ ತೆರಳಲು ಮುಂದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಬಸ್ ಮುಂದೆ ನಿಂತು ಏಕಾಂಗಿ ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹ್ಯಾಟಿ-ಮುಂಡರಗಿ ಮಾರ್ಗವಾಗಿ ಕೊಪ್ಪಳಕ್ಕೆ ತೆರಳುತ್ತಿದ್ದ ಬಸ್ ಅನ್ನು ಬಿ.ಹೊಸಹಳ್ಳಿ ಗ್ರಾಮದ ಬಳಿ ವಿದ್ಯಾರ್ಥಿಗಳು ತಡೆದಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯೊಬ್ಬಳು ಬಸ್‌ನ ಮುಂಭಾಗದಲ್ಲಿ ನಿಂತು, ಶಾಲೆಯಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಬಸ್ ನಿಲ್ಲಿಸದೆ ತೆರಳಿದರೆ ನಾವು ಶಾಲೆಗೆ ಹೇಗೆ ತೆರಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನಮ್ಮ ಶೈಕ್ಷಣಿಕ ಜೀವನ ಹಾಳು ಮಾಡುತ್ತೀರಾ?’ ಎಂದು ಪ್ರಶ್ನಿಸಿದ ವಿದ್ಯಾರ್ಥಿನಿ, ವಿದ್ಯಾರ್ಥಿಗಳಿಗಾಗಿ ಬಸ್ ನಿಲ್ಲಿಸಿ ಶಾಲೆಗೆ ತೆರಳಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ವಿದ್ಯಾರ್ಥಿಗಳ ಪ್ರತಿಭಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.


Spread the love
Share:

administrator

Leave a Reply

Your email address will not be published. Required fields are marked *