ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ; ಗಂಗಾವತಿಯಲ್ಲಿ 18 ವರ್ಷದ ಯುವತಿ ಸ್ಥಳದಲ್ಲೇ ಸಾವು, ಐವರ ಸ್ಥಿತಿ ಗಂಭೀರ

ಕೊಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಯುವತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಂಗಾವತಿ (Gangavati) ತಾಲೂಕಿನ ವಡ್ಡರಹಟ್ಟಿ ಗ್ರಾಮದ ಬಳಿ ನಡೆದಿದೆ.

ಗಂಗಾವತಿ ತಾಲೂಕು ಬಸಾಪಟ್ಟಣ ಗ್ರಾಮದ ಪ್ರೇಮಾ (18) ಮೃತರು. ಆಟೋದಲ್ಲಿದ್ದ ಇನ್ನುಳಿದ ಐವರ ಸ್ಥಿತಿ ಗಂಭೀರವಾಗಿದೆ
ಯುವತಿ ಸೇರಿದಂತೆ ಆಟೋದಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದರು. ಯುವತಿ ಬಸಾಪಟ್ಟಣದಿಂದ ಗಂಗಾವತಿಗೆ ತೆರಳುತ್ತಿದ್ದಳು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಐವರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಸ್ಥಳಕ್ಕೆ ಗಂಗಾವತಿ ನಗರ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ