ಕೊಟ್ಟಿಗೆಹಾರ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಹೃದಯಾಘಾತ

ಕೊಟ್ಟಿಗೆಹಾರ : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ 15 ವರ್ಷದ ಬಾಲಕ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಾನಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ಪ್ರೀತಮ್ (15) ಎಂದು ಗುರುತಿಸಲಾಗಿದೆ. ಬಾಲಕ ರಸ್ತೆ ಮೇಲೆ ನಡೆದು ಹೋಗುತ್ತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾನೆ. ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಆತ ಆದಾಗಲೇ ಸಾವನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಮಲ್ಲೇಗೌಡ ಸರಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಈ ಪ್ರಕರಣ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದೆ.
