Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಹೆಚ್ಚಿದ ನೀರಿನ ಮಟ್ಟ; ಮುಳುಗಿದ ಸ್ನಾನಘಟ್ಟ, ಭಕ್ತರಿಗೆ ಪರ್ಯಾಯ ವ್ಯವಸ್ಥೆ!

Spread the love

ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದ ಕುಮಾರಧಾರಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಪವಿತ್ರ ಸ್ನಾನಘಟ್ಟ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ. ಸುರಕ್ಷತಾ ದೃಷ್ಟಿಯಿಂದ ಭಕ್ತರನ್ನು ನದಿಯತ್ತ ತೆರಳದಂತೆ ದೇವಸ್ಥಾನ ಆಡಳಿತ ಹಾಗೂ ಸ್ಥಳೀಯ ಆಡಳಿತ ಸೂಚನೆ ನೀಡಿದೆ.

ಸ್ನಾನಘಟ್ಟ ಬಳಕೆ ಸಾಧ್ಯವಾಗದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಪರ್ಯಾಯ ವ್ಯವಸ್ಥೆಯಾಗಿ ದೊಡ್ಡ ಡ್ರಮ್‌ಗಳಲ್ಲಿ ನೀರು ತುಂಬಿಸಿ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದ ನಿತ್ಯ ಸಾವಿರಾರು ಭಕ್ತರು ಯಾವುದೇ ತೊಂದರೆಯಾಗದಂತೆ ದೇವರ ದರ್ಶನ ಪಡೆಯುತ್ತಿದ್ದಾರೆ.ನದಿಯಲ್ಲಿ ನೀರಿನ ಹರಿವು ತೀವ್ರವಾಗಿರುವುದರಿಂದ ಪೊಲೀಸರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ ಭಕ್ತರು ನದಿಗೆ ಇಳಿಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ. ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ನದಿಯ ನೀರಿನ ಮಟ್ಟದ ಮೇಲೆ ಆಡಳಿತ ನಿರಂತರ ನಿಗಾ ಇರಿಸಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಪರ್ಯಾಯ ಸ್ನಾನ ವ್ಯವಸ್ಥೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *