Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

‘ಕೂಳೂರು ಸೇತುವೆ’ ವೈರಲ್ ವಿಡಿಯೋ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ

Spread the love

ಮಂಗಳೂರು : ʼಕೂಳೂರು ಸೇತುವೆ ಬಳಿ ದರ್ಪ ಮೆರೆದ ಸಂಚಾರ ಪೊಲೀಸರುʼ ಎಂಬ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದ್ದು, ಇದು ಹಳೆಯ ವಿಡಿಯೋ ಎಂದು ತಿಳಿಸಿದೆ. ವೀಡಿಯೊ 2024ರ ಡಿ.23ರಂದು ಕುದುರೆಮುಖ ಜಂಕ್ಷನ್‌ ನಲ್ಲಿ ನಡೆದಿರುವುದಾಗಿದೆ. ಪಾನಮತ್ತನಾದ ಓರ್ವ ವ್ಯಕ್ತಿ ಕುದುರೆಮುಖ ಜಂಕ್ಷನ್ ನಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆಯುಂಟು ಮಾಡುತ್ತಿದ್ದು, ಸಾರ್ವಜನಿಕರ ಸಹಾಯದೊಂದಿಗೆ ಪೊಲೀಸರು ಆ ವ್ಯಕ್ತಿಯನ್ನು ಬದಿಗೆ ಕಳುಹಿಸಿದರೂ ಆ ವ್ಯಕ್ತಿ ಪದೇ ಪದೇ ರಸ್ತೆಗೆ ಬಂದು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವ ಸಮಯ ತುಂಬಾ ಕುಡಿದಿದ್ದರಿಂದ ಆಯತಪ್ಪಿ ಕೆಳಗೆ ಬಿದ್ದು ಆತನಿಗೆ ಮೂಗಿನಲ್ಲಿ ರಕ್ತ ಬಂದಿರುತ್ತದೆ.
ಈ ವೇಳೆ ಪೊಲೀಸರು ಸಾರ್ವಜನಿಕರ ಸಹಾಯದೊಂದಿಗೆ ಆ ವ್ಯಕ್ತಿಯನ್ನು ಮೇಲಕ್ಕೆತ್ತಿ ಉಪಚರಿಸಿ ಆಸ್ಪತ್ರೆಗೆ ಸಾಗಿಸಲು ವಾಹನದ ಬಳಿ ಕರೆದುಕೊಂಡು ಬರುತ್ತಿರುವಾಗ ಯಾರೋ ಸಾರ್ವಜನಿಕರು ತಪ್ಪಾಗಿ ತಿಳಿದುಕೊಂಡು ವೀಡಿಯೊ ಮಾಡಿ ವೈರಲ್‌ ಮಾಡಿದ್ದಾರೆ ಎಂದು ಪೊಲೀಸ್‌ ಇಲಾಖೆ ಸ್ಪಷ್ಟನೆ ನೀಡಿದೆ.


Spread the love
Share:

administrator

Leave a Reply

Your email address will not be published. Required fields are marked *