Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕುಂದಾಪುರ: ನೇರಳಕಟ್ಟೆ ಹೌಸ್ ಬ್ರೇಕಿಂಗ್ ಕಳ್ಳತನ ಕೇಸ್ ಫಾಸ್ಟ್ ಕ್ಲಿಯರೆನ್ಸ್; ಇಬ್ಬರು ಖದೀಮರು ಪೊಲೀಸ್ ವಶಕ್ಕೆ!

Spread the love

ಕುಂದಾಪುರ: ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ಕುಂಜೆ ಗ್ರಾಮದ ನೇರಳಕಟ್ಟೆಯಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಅತ್ಯಂತ ಕ್ಷಿಪ್ರವಾಗಿ ಭೇದಿಸಿರುವ ವಿಶೇಷ ಪೊಲೀಸ್ ತಂಡವು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಬಂಧಿತರಿಂದ ಅಂದಾಜು ₹11 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬ್ರಹ್ಮಾವರ ತಾಲೂಕಿನ ಕಾಡೂರು ಗ್ರಾಮದ ನಿವಾಸಿ ವಿಜಯ ಶೆಟ್ಟಿ (32) ಮತ್ತು ಕಾರ್ಕಳ ತಾಲೂಕಿನ ಇಂದಾರು ನಿವಾಸಿ ಅರ್ಜುನ ಪೂಜಾರಿ (29) ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣದ ಪ್ರಮುಖ (1ನೇ) ಆರೋಪಿ ಮೊಹಮ್ಮದ್ ಅಶ್ರಫ್ ಸದ್ಯ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

ಕಳೆದ ಮೇ 23 ರಂದು ಕರ್ಕುಂಜೆ ಗ್ರಾಮದ ನೇರಳಕಟ್ಟೆ ನಿವಾಸಿ ನಿರಂಜನ್ ಭಟ್ ಎಂಬುವವರು ತಮ್ಮ ಮನೆಗೆ ಬೀಗ ಹಾಕಿ ತೆರಳಿದ್ದರು. ಈ ನಡುವೆ ಬೆಳಿಗ್ಗೆ 11:47 ರಿಂದ ರಾತ್ರಿ 9:10 ರ ಮಧ್ಯದ ಅವಧಿಯಲ್ಲಿ ಮನೆಯ ಬಾಗಿಲಿನ ಬೀಗ ಮುರಿದು ಒಳ ನುಗ್ಗಿದ ಖದೀಮರು, ಲಾಕರ್‌ನಲ್ಲಿದ್ದ ಭಾರಿ ಪ್ರಮಾಣದ ಚಿನ್ನ, ಬೆಳ್ಳಿ ಹಾಗೂ ನಗದು ಹಣವನ್ನು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯಡಿ ಕಳ್ಳತನ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಗಾಂಭೀರ್ಯವನ್ನು ಪರಿಗಣಿಸಿ ಕುಂದಾಪುರ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ (DySP) ಎಚ್.ಡಿ. ಕುಲಕರ್ಣಿ ಹಾಗೂ ವೃತ್ತ ನಿರೀಕ್ಷಕರಾದ (CI) ಸಂತೋಷ ಎ. ಕಾಯ್ಕಿಣಿ ಅವರ ನೇರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಜೂನ್ 3 ರಂದು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತಂಡವು ಇಬ್ಬರು ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ.
ಬಂಧಿತ 2ನೇ ಆರೋಪಿ ವಿಜಯ ಶೆಟ್ಟಿಯಿಂದ ಸುಮಾರು ₹9 ಲಕ್ಷ ಮೌಲ್ಯದ 66.22 ಗ್ರಾಂ ಚಿನ್ನ ಮತ್ತು 175.4 ಗ್ರಾಂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಾಗೆಯೇ 3ನೇ ಆರೋಪಿ ಅರ್ಜುನ ಪೂಜಾರಿಯಿಂದ ಸುಮಾರು ₹2 ಲಕ್ಷ ಮೌಲ್ಯದ 18.200 ಗ್ರಾಂ ತೂಕದ ಚಿನ್ನಾಭರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಒಟ್ಟು ₹11 ಲಕ್ಷ ಮೌಲ್ಯದ ಸೊತ್ತನ್ನು ಸ್ವಾಧೀನಪಡಿಸಿಕೊಂಡಿರುವ ಪೊಲೀಸರು, ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ತಲೆಮರೆಸಿಕೊಂಡಿರುವ ಮೊದಲ ಆರೋಪಿ ಅಶ್ರಫ್‌ಗಾಗಿ ಬಲೆ ಬೀಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *