Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೀರೂರು ಪಟ್ಟಣದಲ್ಲಿ ಚಿರತೆ ಭೀತಿ: ನಾಯಿಯ ಬೇಟೆಗೆ ಹೊಂಚು ಹಾಕಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ; ಬೆಚ್ಚಿಬಿದ್ದ ನಿವಾಸಿಗಳು!

Spread the love

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ಚಿರತೆ ಸಂಚಾರ ಹೆಚ್ಚಿರುವುದು ಜನರಲ್ಲಿ ಭಾರೀ ಆತಂಕ ಮೂಡಿಸಿದೆ. ರಾತ್ರಿ ಸಮಯದಲ್ಲಿ ಪಟ್ಟಣದ ಇಂಡಸ್ಟ್ರಿಯಲ್ ಏರಿಯಾ, ಅಮೃತ್ ಮಹಲ್ ಕಾವಲು ಸುತ್ತಮುತ್ತ ಹಾಗೂ ಮನೆಗಳ ಬಳಿ ಚಿರತೆ ಓಡಾಡುತ್ತಿರುವ ದೃಶ್ಯಗಳು ಕಂಡುಬಂದಿವೆ

ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಚಿರತೆ ಹೊಂಚು ಹಾಕಿ ಕುಳಿತಿರುವುದು ಸಿಸಿ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ. ಜನವಸತಿ ಪ್ರದೇಶದಲ್ಲೇ ಚಿರತೆ ಸಂಚಾರ ಹೆಚ್ಚಿರುವುದರಿಂದ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಘಟನೆ ಬೀರೂರು ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯನ್ನು ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *