Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು!

Spread the love

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಗೌರವದ ದುರಂತ ಒಂದು ಸಂಭವಿಸಿದ್ದು ಕಟ್ಟಡ ಕಾಮಗಾರಿ ಸಂದರ್ಭದಲ್ಲಿ ಏಕಾಏಕಿ ಲಿಫ್ಟ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ.

ಮೃತರನ್ನು ಪ್ರಭಾಕರ್‌ ಮುತ್ತಪ್ಪ ಶೆಟ್ಟಿ, ಬಾಬಣ್ಣ ಪೂಜಾರಿ ಎಂದು ಗುರುತಿಸಲಾಗಿದೆ. ಮುರ್ಡೇಶ್ವರದ ಓಲಗ ಮಂಟಪದ ಸಮೀಪ ನಾಲ್ಕು ಮಹಡಿಗಳ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ತಾತ್ಕಾಲಿಕ ಲಿಫ್ಟ್ ಅಳವಡಿಸಲಾಗಿತ್ತು.

ಅತಿ ಭಾರವಾದ ಕಾರಣ ಏಕಾಏಕಿ ಹಗ್ಗ ತುಂಡಾಗಿ ಲಿಫ್ಟ್ ನೆಲಕ್ಕೆ ಕುಸಿದಿದೆ. ಅದರಲ್ಲಿದ್ದ ಇಬ್ಬರು ಕಾರ್ಮಿಕರು ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *