Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಲಿವ್-ಇನ್ ರಿಲೇಷನ್‌ಶಿಪ್‌ ಸಂಕಷ್ಟ: ಪೊಲೀಸ್ ಕಾನ್‌ಸ್ಟೆಬಲ್‌ನಿಂದ ವಂಚನೆಗೊಳಗಾದ ಮಹಿಳೆ ಆತ್ಮಹ*ತ್ಯೆ!

Spread the love

ಲಕ್ನೋ: ನಾಲ್ಕು ವರ್ಷ ನನ್ನ ಜೊತೆ ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ಈಗ ಬೇರೊಬ್ಬಳನ್ನು ವಿವಾಹವಾಗಿದ್ದಾರೆಂದು ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಗ್ರಾದಲ್ಲಿ (Agra) ನಡೆದಿದೆ.
ತಾಜ್‌ಗಂಜ್ ಪೊಲೀಸ್ ಠಾಣೆಯ ಜೆ.ವಿ. ಗೌತಮ್ ನಾಲ್ಕು ವರ್ಷಗಳಿಂದ ತನ್ನೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದರು. ಮದುವೆಯಾಗುವ ಭರವಸೆ ನೀಡಿ ಆತ ನನ್ನನ್ನು ಹೆಂಡತಿಯಂತೆ ಇಟ್ಟುಕೊಂಡಿದ್ದ. ನಂತರ ಮದುವೆಯಾಗಲು ನಿರಾಕರಿಸಿದ ಎಂದು ಆರೋಪಿಸಿದ್ದರುಈ ಅವಧಿಯಲ್ಲಿ ತಾನು ದೈಹಿಕ ಮತ್ತು ಮಾನಸಿಕ ಶೋಷಣೆಗೆ ಒಳಗಾಗಿದ್ದೇನೆ ಎಂದು ಆಕೆ ಹೇಳಿಕೊಂಡಿದ್ದಾಳೆ. ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋದಾಗ, ಏನೂ ಮಾಡಲು ಸಾಧ್ಯವಿಲ್ಲ ಮತ್ತು ಕಾನ್‌ಸ್ಟೆಬಲ್ ಕ್ರಮದಿಂದ ಬಚಾವ್‌ ಆಗ್ತಾರೆ ಎಂದು ಹೇಳಲಾಗಿತ್ತು.ಕಾನ್‌ಸ್ಟೆಬಲ್ ತನ್ನ ಕುಟುಂಬದವರು ತಮ್ಮ ಮದುವೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾಗಿ ಮಹಿಳೆ ತಿಳಿಸಿದ್ದಾರೆ. ಗೌತಮ್ ಮತ್ತು ಅವನ ಕುಟುಂಬವು ನನಗೆ ಹಿಂಸೆ ನೀಡಿದೆ. ಮಾನಸಿಕವಾಗಿ ತೊಂದರೆ ನೀಡಿದೆ. ನಾಲ್ಕು ವರ್ಷಗಳ ಕಾಲ ನನ್ನೊಂದಿಗೆ ವಾಸಿಸಿದ್ದ. ಅವನು ಈಗ ಇನ್ನೊಬ್ಬಳನ್ನು ಮದುವೆಯಾಗಲು ತಯಾರಿ ನಡೆಸುತ್ತಿದ್ದಾನೆ ಎಂದು ಆತ್ಮಹತ್ಯೆಗೂ ಮುನ್ನ ಮಹಿಳಾ ವಿಡಿಯೋ ಮಾಡಿಟ್ಟಿದ್ದಾರೆ.

ವಿಡಿಯೋದಲ್ಲಿ ಮಹಿಳೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೂ ಮನವಿ ಮಾಡಿಕೊಂಡಿದ್ದು, ತಾನು ಬದುಕಿದ್ದಾಗ ನ್ಯಾಯ ಸಿಕ್ಕಿಲ್ಲ. ತನ್ನ ಮರಣದ ನಂತರ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದಾರೆ. ಈ ವಿಡಿಯೋಗಳು ವೈರಲ್ ಆಗಿ ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದ ನಂತರ, ಕಾನ್‌ಸ್ಟೆಬಲ್ ಜೆ.ವಿ.ಗೌತಮ್ ಅವರನ್ನು ಅಮಾನತುಗೊಳಿಸಲಾಗಿದೆ.ಆ ಮಹಿಳೆ ಮೂಲತಃ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯವಳು. ಆಕೆಗೆ ಮೊದಲೇ ಮದುವೆಯಾಗಿ ವಿಚ್ಛೇದನ ಪಡೆದಿದ್ದಳು. ಆಗ್ರಾದಲ್ಲಿ ಖಾಸಗಿ ಉದ್ಯೋಗದಲ್ಲಿ ಕೆಲಸ ಮಾಡುತ್ತಿದ್ದಾಗ ಕಾನ್‌ಸ್ಟೆಬಲ್‌ ಪರಿಚಯವಾಗಿ, ಪ್ರೀತಿಸಿದ್ದರು.


Spread the love
Share:

administrator

Leave a Reply

Your email address will not be published. Required fields are marked *