ಬೀದರ್ ವಿಶ್ವವಿದ್ಯಾಲಯಕ್ಕೆ ಲೋಕಾಯುಕ್ತ ಶಾಕ್!

ಬೀದರ್: ಬೀದರ್‌ನ ಪಶು & ಮೀನುಗಾರಿಕಾ ವಿಶ್ವ ವಿದ್ಯಾಲಯದಲ್ಲಿ (Bidar University) 2017-19ರವರೆಗೆ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ಬೀದರ್‌ನಲ್ಲಿ ಬೆಳ್ಳಂ ಬೆಳಿಗ್ಗೆಯೇ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ (Lokayukta) ಬಿಗ್ ಶಾಕ್ ನೀಡಿದೆ. ಪಶು ಮತ್ತು ಮೀನುಗಾರಿಕಾ ವಿಶ್ವವಿದ್ಯಾಲಯದ ಸಿಬ್ಬಂದಿಗಳ ಮನೆ ಮೇಲೆ ದಾಳಿ (Raid) ಮಾಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಬೀದರ್‌ನಲ್ಲಿ ಒಟ್ಟು 25 ಕಡೆ ದಾಳಿ
ಬೀದರ್‌ನಲ್ಲಿ ಒಟ್ಟು 25 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ವಿಶ್ವವಿದ್ಯಾಲಯದ ಪ್ರೊಫೆಸರ್, ಇಂಜಿನಿಯರ್ಸ್ ಸೇರಿ ಸಿಬ್ಬಂದಿಗಳ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗ್ತಿದೆ.
67 ಕಡೆ 69 ತಂಡಗಳಿಂದ ದಾಳಿ
ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾಗ್ತಿರುವ ಹಗರಣದ ಕುರಿತು ದಾಳಿ ನಡೆಸಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಬೀದರ್, ಬೆಂಗಳೂರು, ಉಡುಪಿ, ಚಿಕ್ಕಮಗಳೂರು ಸೇರಿದಂತೆ 67 ಕಡೆ 69 ತಂಡಗಳಿಂದ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ದಾಖಲೆಗಳನ್ನ ಜಾಲಾಡ್ತಿದ್ದಾರೆ ಎನ್ನಲಾಗ್ತಿದೆ.
28 ಕೋಟಿ ಅವ್ಯವಹಾರ ಬಯಲು
ವಿಶ್ವವಿದ್ಯಾಲಯದಲ್ಲಿ 2017-19ರವರೆಗೆ ಕೋಟ್ಯಂತರ ರೂ. ಅವ್ಯವಹಾರ ನಡೆದಿದೆ ಎನ್ನುವ ಆರೋಪ ಇದೆ. 2021ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದು, ತನಿಖೆ ವೇಳೆ ಸುಮಾರು 28 ಕೋಟಿ ಅವ್ಯವಹಾರ ಬಯಲಿಗೆ ಬಂದಿದೆ ಎಂದು ವರದಿ ಆಗಿದೆ.
ಪೀಠೋಪಕರಣ, ಸ್ಟೇಷನರಿ ಖರೀದಿಯಲ್ಲಿ ಅಕ್ರಮ
ವಿಶ್ವವಿದ್ಯಾಲಯದ ಅಧಿಕಾರಿಗಳು & ಸಿಬ್ಬಂದಿಗಳು ಎಂಟರ್ಪ್ರೈಸ್ ಜೊತೆ ಶಾಮೀಲಾಗಿ ಪೀಠೋಪಕರಣ, ಸ್ಟೇಷನರಿ ಖರೀದಿಯಲ್ಲಿ ಅಕ್ರಮ ಎಸಗಿದ್ದಾರೆ ಎನ್ನಲಾಗ್ತಿದೆ.
ಸಿಬ್ಬಂದಿಗಳ ಮನೆಯಲ್ಲಿ ಪರಿಶೀಲನೆ
ಹಣ ವರ್ಗಾವಣೆ ಹಾಗೂ ಅಕ್ರಮದಲ್ಲಿ ಭಾಗಿಯಾಗಿರುವ ವಿಶ್ವವಿದ್ಯಾಲಯದ ಸಿಬ್ಬಂದಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬಿಕರ್, ಐಜಿಪಿ ಸುಬ್ರಮಣ್ಯರಾವ್ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗ್ತಿದೆ ಎಂದು ತಿಳಿದು ಬಂದಿದೆ.
