Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಲಖನೌ: ನೀಟ್ ಮರು ಪರೀಕ್ಷೆಯ ಭೀಕರ ಒತ್ತಡಕ್ಕೆ ಮತ್ತೊಂದು ಬಲಿ; 17 ವರ್ಷದ ವಿದ್ಯಾರ್ಥಿನಿ ಸುಹಾನಿ ಯಾದವ್ ಆತ್ಮಹ*ತ್ಯೆ!

Spread the love

ಲಖನೌ: ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಉತ್ತರ ಪ್ರದೇಶದ ಲಖನೌನಲ್ಲಿ ಶುಕ್ರವಾರ 17 ವರ್ಷದ ವಿದ್ಯಾರ್ಥಿನಿಯೊಬ್ಬರು ಸಾವಿಗೆ ಶರಣಾಗಿದ್ದಾರೆ. ಇದು ನೀಟ್ ಪರೀಕ್ಷೆ ರದ್ದತಿ ಮತ್ತು ಮರು ಪರೀಕ್ಷೆಯಿಂದ ವಿದ್ಯಾರ್ಥಿಗಳು ಎದುರಿಸುತ್ತಿರುವ ಅಪಾರ ಒತ್ತಡವನ್ನು ಎತ್ತಿ ತೋರಿಸುತ್ತದೆ.

ಜೂನ್ 19 ರಂದು ಲಖನೌನಲ್ಲಿ 17 ವರ್ಷದ ನೀಟ್ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೂನ್ 21 ರಂದು ನೀಟ್ ಮರು ಪರೀಕ್ಷೆ ನಿಗದಿಯಾಗಿದ್ದು, ಪರೀಕ್ಷೆಗೆ ಕೇವಲ ಎರಡು ದಿನ ಇರುವಾಗಲೇ ಸುಹಾನಿ ಯಾದವ್ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿದ್ಯಾರ್ಥಿನಿ ತನ್ನ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ಬಜಾರ್ ಖಾಲಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಬ್ರಿಜೇಶ್ ಸಿಂಗ್ ತಿಳಿಸಿದ್ದಾರೆ. ಆದರೆ ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ.

ಮೇ 3 ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿ ಆಕೆ ಉತ್ತಮವಾಗಿ ಬರೆದಿದ್ದಳು. ಅದರಲ್ಲಿ ಉತ್ತೀರ್ಣಳಾಗುವ ಭರವಸೆಯಲ್ಲಿದ್ದಳು. ಆದರೆ ಆ ಪರೀಕ್ಷೆಯನ್ನು ರದ್ದುಗೊಳಿಸಲಾಯಿತು ಎಂದು ಮೃತಳ ಕುಟುಂಬ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ.

“ಸುಹಾನಿ ಕಳೆದ ಮೂರು ನಾಲ್ಕು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದಳು. ನಂತರ ಅವಳು ಮತ್ತೆ ಪರೀಕ್ಷೆಗೆ ತಯಾರಿ ಆರಂಭಿಸಿದಳು. ಆದರೆ ಪರೀಕ್ಷೆಯಿಂದಾಗಿ ಅವಳು ತೀವ್ರ ಒತ್ತಡಕ್ಕೆ ಸಿಲುಕಿದ್ದಳು ಎಂದು ಕುಟುಂಬ ಸದಸ್ಯರು ಹೇಳಿದ್ದಾರೆ” ಎಂದು ಸಿಂಗ್ ತಿಳಿಸಿದ್ದಾರೆ.

ಹುಡುಗಿಯ ಕುಟುಂಬ ಮೂಲತಃ ಪಾಟ್ನಾದವರಾಗಿದ್ದು, ಆಕೆಯ ತಂದೆ ಭಾರತೀಯ ರೈಲ್ವೆಯಲ್ಲಿ ಟಿಕೆಟ್ ಪರೀಕ್ಷಕರಾಗಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *