Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಹಾರಾಷ್ಟ್ರ: ಭಂಡಾರಾದಲ್ಲಿ ಭೀಕರ ರಸ್ತೆ ಅಪಘಾತ – 6 ಮಹಿಳೆಯರು, 3 ಮಕ್ಕಳು ಸೇರಿದಂತೆ ಒಟ್ಟು 9 ಮಂದಿ ದಾರುಣ ಸಾ*ವು!

Spread the love

ಭಂಡಾರಾ : ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ನಾಗ್ಪುರ-ರಾಯ್‌ಪುರ ರಾಷ್ಟ್ರೀಯ ಹೆದ್ದಾರಿಯ ಪಿಂಪಲ್‌ಗಾಂವ್ ಬಳಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದಂತೆ ಒಟ್ಟು ಒಂಬತ್ತು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.

ಹೆದ್ದಾರಿ ಬದಿಯಲ್ಲಿದ್ದ ಪೆಟ್ರೋಲ್ ಪಂಪ್‌ನಿಂದ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದಾಗ, ಅದೇ ಮಾರ್ಗದಲ್ಲಿ ಅತ್ಯಂತ ವೇಗವಾಗಿ ಬಂದ ಬೊಲೆರೊ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ನ ಹಿಂಭಾಗಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೊಲೆರೊ ವಾಹನ ನಜ್ಜುಗುಜ್ಜಾಗಿದ್ದು, ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದು, ಒಟ್ಟು ಸಾವಿನ ಸಂಖ್ಯೆ 9ಕ್ಕೇರಿದೆ.

ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ, ಚಿಕಿತ್ಸೆಗಾಗಿ ಸಕೋಲಿ ಉಪ-ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳದ ಸಮೀಪದಲ್ಲಿದ್ದ ಸಿಸಿಟಿವಿ (CCTV) ಕ್ಯಾಮೆರಾಗಳಲ್ಲಿ ಅಪಘಾತದ ದೃಶ್ಯಾವಳಿಗಳು ಸೆರೆಯಾಗಿವೆ. ಅಪಘಾತಕ್ಕೆ ಕೆಲವೇ ಕ್ಷಣಗಳ ಮೊದಲು ಬೊಲೆರೊ ವಾಹನವು ಹೆದ್ದಾರಿಯಲ್ಲಿ ಅತಿಯಾದ ವೇಗದಲ್ಲಿ ಚಲಿಸುತ್ತಿದ್ದುದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ಅತಿವೇಗ ಹಾಗೂ ಚಾಲಕನ ನಿಯಂತ್ರಣ ತಪ್ಪಿದ್ದೇ ಈ ಭೀಕರ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *