ಮಹಾರಾಷ್ಟ್ರ: ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು; ಒಂದೇ ಕುಟುಂಬದ 9 ಮಂದಿ ಜಲಸಮಾಧಿ

ಮುಂಬೈ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಕ್ಟೋರಿ ತಾಲೂಕಿನಲ್ಲಿ ಕಾರು ಬಾವಿಗೆ ಬಿದ್ದ ಪರಿಣಾಮ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ.
ಸ್ಥಳೀಯ ಪೊಲೀಸರು ಮತ್ತು ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ತೆರಳಿ ಮಧ್ಯರಾತ್ರಿಯ ಸುಮಾರಿಗೆ ಕ್ರೇನ್‌ಗಳು ಮತ್ತು ಈಜುಗಾರರ ಸಹಾಯದಿಂದ ಕಾರನ್ನು ಹೊರತೆಗೆದಿದ್ದಾರೆ.
ಮೃತರನ್ನು ಸುನಿಲ್ ದತ್ತು ದರ್ಗುಡೆ (32), ಅವರ ಪತ್ನಿ ರೇಷ್ಮಾ ಆಶಾ ಅನಿಲ್ ದರ್ಗುಡೆ (32) ಎಂದು ಗುರುತಿಸಲಾಗಿದೆ. ಇದಲ್ಲದೆ ಅವರ ಕುಟುಂಬದ ಆರು ಮಕ್ಕಳು ಮೃತಪಟ್ಟಿದ್ದಾರೆ. ಮೃತದೇಹವನ್ನು ದಿಂಡೋರಿಯ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ಕುರಿತು ಪ್ರಕರಣ ದಾಖಲಾಗಿದ್ದು, ಈ ಕುರಿತು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
