Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬ್ಯಾಂಕ್ ನಾಮಿನಿ ನಿಯಮದಲ್ಲಿ ನ.1 ರಿಂದ ಮಹತ್ವದ ಬದಲಾವಣೆ: ಇನ್ನು ಮುಂದೆ ಒಂದು ಖಾತೆಗೆ 4 ನಾಮಿನಿಗಳಿಗೆ ಅವಕಾಶ!

Spread the love

ನವದೆಹಲಿ: ನವೆಂಬರ್ 1ರಿಂದ ಬ್ಯಾಂಕ್‌ಗಳ ನಾಮಿನಿ ನಿಯಮದಲ್ಲಿ (Nomination rules) ಬದಲಾವಣೆ ಆಗಲಿದ್ದು, ಬ್ಯಾಂಕ್ ಅಕೌಂಟ್, ಲಾಕರ್‌ಗಳಿಗೆ 1ಕ್ಕಿಂತ ಹೆಚ್ಚು ನಾಮಿನಿಗಳನ್ನು ಮಾಡಬಹುದು ಎಂದು ಕೇಂದ್ರ ಹಣಕಾಸು ಇಲಾಖೆ (Finance Department) ತಿಳಿಸಿದೆ.

ಈವರೆಗೆ 1 ಬ್ಯಾಂಕ್ ಖಾತೆ ಅಥವಾ ಲಾಕರ್‌ಗಳಿಗೆ ಇದ್ದ ಒಬ್ಬರು ನಾಮಿನಿ ಬದಲಿಗೆ ನಾಲ್ವರು ನಾಮಿನಿಗಳಿಗೆ ಅವಕಾಶ ಸಿಗಲಿದೆ. ಈ ಮೂಲಕ ಕ್ಲೈಮ್‌ ಸೆಟಲ್‌ಮೆಂಟ್‌ಗಳು ಮತ್ತಷ್ಟು ನೇರ ಹಾಗೂ ಸುಲಭವಾಗಲಿದೆ. ಡೆಪಾಸಿಟ್ ವೇಳೆಯೇ ಖಾತೆದಾರರು 4 ನಾಮಿನಿಗಳನ್ನು ಆಯ್ಕೆ ಮಾಡಬಹುದು. ಠೇವಣಿದಾರರು ಮೃತರಾದ ನಂತರ ಇದರಲ್ಲಿ ಕ್ರಮಸಂಖ್ಯೆಗೆ ಅನುಗುಣವಾಗಿ ಖಾತೆದಾರರ ಹಣಕಾಸಿಗೆ ಉತ್ತರಾಧಿಕಾರಿಗಳಾಗಲಿದ್ದಾರೆ.

ಇದರಿಂದಾಗಿ ಗೌಜು ಗೊಂದಲ ಇಲ್ಲದೇ ನಿಗದಿತ ಹಣಕಾಸಿನ ಭಾಗವು ಆ ನಾಮಿನಿಗಳಿಗೆ ನೇರವಾಗಿ ವರ್ಗಾವಣೆ ಆಗಲಿದೆ. ಬ್ಯಾಂಕಿಂಗ್ ಕಾನೂನುಗಳು (ತಿದ್ದುಪಡಿ) ಕಾಯಿದೆ-2025 ನವೆಂಬರ್ 1ರಿಂದ ಜಾರಿಗೆ ಬರಲಿದೆ ಅಂತ ಕೇಂದ್ರ ಹಣಕಾಸು ಇಲಾಖೆ ಹೇಳಿದೆ.


Spread the love
Share:

administrator

Leave a Reply

Your email address will not be published. Required fields are marked *