ಏಪ್ರಿಲ್ 1 ರಿಂದ ಟೋಲ್ ಪಾವತಿ ನಿಯಮದಲ್ಲಿ ಮಹತ್ವದ ಬದಲಾವಣೆ

ಬಡವರು ಹೆದ್ದಾರಿ ನಿರ್ಮಾಣದಲ್ಲಿ ಹೂಡಿಕೆ ಮಾಡಬೇಕೆಂದು ನಾನು ಬಯಸುತ್ತೇನೆ, ಬ್ಯಾಂಕುಗಳು ಠೇವಣಿಗಳ ಮೇಲೆ ನೀಡುವ 4.5% ಬಡ್ಡಿಯ ಬದಲು, ನಾವು ಅವರಿಗೆ 8.05% ಬಡ್ಡಿಯನ್ನು ನೀಡುತ್ತೇವೆ” ಎಂದು ನಿತಿನ್ ಗಡ್ಕರಿ ಹೇಳಿದರು.

ಟೋಲ್ ಪಾವತಿಸಲು ಫಾಸ್ಟ್‌ಟ್ಯಾಗ್ ವ್ಯವಸ್ಥೆ ಜಾರಿಗೆ ಬಂದ ನಂತರವೂ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ ದೀರ್ಘ ಸರತಿ ಸಾಲುಗಳನ್ನು ಕಾಣುತ್ತಿದ್ದೇವೆ. ಇದನ್ನ ತಪ್ಪಿಸಲು ಕೇಂದ್ರ ಸರ್ಕಾರವು ವಾರ್ಷಿಕ ಪಾಸ್‌ಗಳನ್ನು ನೀಡುವ ಬಗ್ಗೆ ಯೋಚಿಸುತ್ತಿದೆ ಎನ್ನಲಾಗಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ನಿತಿನ್ ಗಡ್ಕರಿ ಹೀಗೆ ಹೇಳಿದರು. ಇದು ಪ್ರಯಾಣಿಕರ ಸಮಯವನ್ನು ಉಳಿಸುತ್ತದೆ ಮತ್ತು ಅನಗತ್ಯವಾಗಿ ಉದ್ದನೆಯ ಸರತಿ ಸಾಲಿನಲ್ಲಿ ನಿಲ್ಲುವ ಅಗತ್ಯವನ್ನು ನಿವಾರಿಸುತ್ತದೆ ಎಂದು ಸಂಸತ್ತಿಗೆ ತಿಳಿಸಿದರು. ಇದರ ಜೊತೆಗೆ, ಕೆಲವು ಸ್ಥಳಗಳಲ್ಲಿ ತಡೆರಹಿತ ಟೋಲ್ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಅವರು ಹೇಳಿದರು. ಪ್ರಸ್ತುತ, ಇದನ್ನು ಪೈಲಟ್ ಯೋಜನೆಯಾಗಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆ ಯಶಸ್ವಿಯಾದರೆ, ಭವಿಷ್ಯದಲ್ಲಿ ಇದನ್ನು ವಿಸ್ತರಿಸುವ ಬಗ್ಗೆ ಚರ್ಚೆಗಳು ನಡೆಯಲಿವೆ ಎಂದರು
