ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ: ಇನ್ಮುಂದೆ ಪಿಯುಸಿ ವಿದ್ಯಾರ್ಥಿಗಳಿಗೂ ಸಿಗಲಿದೆ ಮಧ್ಯಾಹ್ನದ ಬಿಸಿಯೂಟ?

ಬೆಂಗಳೂರು: ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ (State Govt) ಗುಡ್‌ನ್ಯೂಸ್ ನೀಡಲು ಮುಂದಾಗಿದ್ದು, ಇನ್ಮುಂದೆ ಪಿಯುಸಿ (PUC) ಮಕ್ಕಳಿಗೂ ಮಧ್ಯಾಹ್ನ ಬಿಸಿಯೂಟ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ.

ಸದ್ಯ 1ರಿಂದ 10ನೇ ತರಗತಿವರೆಗೂ ಇರುವ ಬಿಸಿಯೂಟವನ್ನು ಸರ್ಕಾರಿ, ಅನುದಾನ ಪಿಯು ಕಾಲೇಜುವರೆಗೂ ವಿಸ್ತರಣೆ ಮಾಡುವ ಸಾಧ್ಯತೆಯಿದೆ. ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಮಕ್ಕಳಿಗೂ ವಿಸ್ತರಿಸಬಹುದು ಎಂದು ಶಿಕ್ಷಣ ಇಲಾಖೆ ಮೂಲಗಳು ಮಾಹಿತಿ ನೀಡಿದೆ.
ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವ ಬಗ್ಗೆ ನ.14 ಮಕ್ಕಳ ದಿನಾಚರಣೆಯಂದು ಸಿಎಂ ಸಿದ್ದರಾಮಯ್ಯನವರು ಘೋಷಣೆ ಮಾಡುವ ಸಾಧ್ಯತೆ ಇದೆ.