Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಲ್ಪೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Spread the love

ಉಡುಪಿ : ಮೀನು ಕದ್ದ ಆರೋಪದ ಮೇಲೆಗೆ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡೆದಿತ್ತು. ಈ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಬಿಡುಗಡೆಗೊಳಿಸುವಂತೆ ಹೈಕೋರ್ಟ್ ನಿನ್ನೆ (ಮಾ.27) ಆದೇಶ ನೀಡಿದೆ.

ಮಾ.18ರಂದು ಬೆಳಗ್ಗೆ 6ಗಂಟೆ ಸುಮಾರಿಗೆ ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ವಿಜಯನಗರ ಮೂಲದ ಲಕ್ಕಿ ಬಾಯಿ ಎಂಬವರನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿತ್ತು. ಈ ಸಂಬಂಧ ಲಕ್ಷ್ಮೀ, ಶಿಲ್ಪ, ಸುಂದರ್, ಲೀಲಾ ಮತ್ತು ಪಾರ್ವತಿ ಎಂಬವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದರು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಐವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಿನ್ನೆ ನಡೆದಿತ್ತು. ಆರೋಪಿಗಳನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಊರ್ಮಿಳಾ ಪುಲ್ಲಟ್ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದ ಬಂಧಿತ ಆರೋಪಿಗಳಾದ ಲಕ್ಷ್ಮೀ, ಶಿಲ್ಪಮತ್ತು ಸುಂದ‌ರ್ ಎಂಬವರನ್ನು ಬಿಡುಗಡೆಗೊಳಿಸುವಂತೆ ಆದೇಶ ನೀಡಿದೆ.
ಸರಕಾರಿ ಅಭಿಯೋಜಕ ಜಯರಾಮ ಶೆಟ್ಟಿ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದು, ಆರೋಪಿಗಳ ಪರ ಹಿರಿಯ ವಕೀಲ ಶಾಂತಾರಾಮ್ ಶೆಟ್ಟಿ ವಾದ ಮಂಡಿಸಿದ್ದರು. ಈ ಮಧ್ಯೆ ಹೈಕೋರ್ಟ್ ಮೂವರು ಆರೋಪಿಗಳ ಬಿಡುಗಡೆ ಮಾಡಿದ್ದು, ಉಳಿದ ಇಬ್ಬರು ಆರೋಪಿಗಳಿಗೆ ಸಂಬಂಧಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ಮಾ.29ಕ್ಕೆ ಮುಂದೂಡಿ ನ್ಯಾಯಾಲಯ ಆದೇಶಿಸಿದೆ.


Spread the love
Share:

administrator

Leave a Reply

Your email address will not be published. Required fields are marked *