Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಲ್ಪೆ: ಮೀನು ಕಳವು ಆರೋಪ – ಮಹಿಳೆಗೆ ಹಲ್ಲೆ

Spread the love

ಮಲ್ಪೆ: ಉಡುಪಿ ಜಿಲ್ಲೆಯ ಮಲ್ಲೆ ಬಂದರಿನಲ್ಲಿ ವಿಜಯನಗರ ಜಿಲ್ಲೆ ಮೂಲದ ದಲಿತ ಮಹಿಳೆಯನ್ನು ಮೀನು ಕದ್ದ ಆರೋಪದಲ್ಲಿ ಮರಕ್ಕೆ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಪೊಲೀಸರು ಬಂಧಿಸಿದವರು ಸ್ಥಳೀಯರಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ಇನ್ನೋರ್ವ ಎಂದು ಗುರುತಿಸಲಾಗಿದೆ.

ಮಾ.18ರಂದು ವಿಜಯನಗರ ಜಿಲ್ಲೆ ಮೂಲದ ಮಹಿಳೆಗೆ ಹಲ್ಲೆ ನಡೆಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಮಲ್ಪೆ ಪೊಲೀಸರು, ಹಲ್ಲೆಗೊಳಗಾದ ಮಹಿಳೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಮಹಿಳೆ ಬಂದರಿನಲ್ಲಿ ಮೀನು ಕದ್ದಿದ್ದಾರೆಂದು ಆರೋಪಿಸಿ ಲಕ್ಷ್ಮೀಬಾಯಿ ಎಂಬವರು ಹಲ್ಲೆ ಮಾಡಿದ್ದಾರೆ. ನಂತರ ಸ್ಥಳೀಯರು ಸೇರಿ, ಆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಈ ಬಗ್ಗೆ ಮಹಿಳೆ ನೀಡಿದ ದೂರಿನಂತೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸ್ಪಿ ಡಾ.ಕೆ.ಅರಣ್ ಹೇಳಿದ್ದಾರೆ.

ವಿಡಿಯೋವನ್ನು ಪರಿಶೀಲಿಸಿ, ಅದರಲ್ಲಿ ಮಹಿಳೆಗೆ ಹಲ್ಲೆ ನಡೆಸಿರುವ ನಾಲ್ವರನ್ನು ಬಂಧಿಸಲಾಗಿದೆ. ಇನ್ನು ಉಳಿದವರ ಪಾತ್ರದ ಬಗ್ಗೆ ವಿಡಿಯೋ ಮೂಲಕ ಪರಿಶೀಲನೆ ಮಾಡಿ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *