ಬೆಂಗಳೂರಿನ ಜೆಪಿ ನಗರದಲ್ಲಿ ಪತ್ನಿ ಮೇಲೆ ಆಸಿಡ್ ಎರಚಿ ಮಚ್ಚಿನಿಂದ ಹ*ಲ್ಲೆ

ಬೆಂಗಳೂರಲ್ಲಿ ಪತ್ನಿಯ ಮೇಲೆ ಆಸಿಡ್ ದಾಳಿ..!ಪತ್ನಿಯ ಮೇಲೆ ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಆರೋಪ ಜೆಪಿ ನಗರದ 3ನೇ ಹಂತದ ನಾರಾಯಣ ಕ್ಲಿನಿಕ್ ಬಳಿ ಘಟನೆ.
26 ವರ್ಷದ ಮಧುಮಿತ ಹಲ್ಲೆಗೊಳಗಾದ ಮಹಿಳೆ.ಕ್ಲಿನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡ್ತಿದ್ದ ಮಧುಮಿತ.ಬೆಳಗ್ಗೆ 9.15ರ ಸುಮಾರಿಗೆ ತಿಂಡಿಗೆ ಹೊರಬಂದಿದ್ದ ವೇಳೆ, ಬೈಕ್‌ನಲ್ಲಿ ಬಂದ ಪತಿ ವೆಂಕಟೇಶ್ ಹಿಂಬಾಲಿಸಿ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.ಮಹಿಳೆಯ ರಕ್ಷಣೆಗೆ ಸ್ಥಳೀಯರು ಧಾವಿಸಿದ್ದು, ಸಂಚಾರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗಂಭೀರ ಗಾಯಗೊಂಡ ಮಧುಮಿತಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಸದ್ಯ ಪತಿ ವೆಂಕಟೇಶ್‌ನನ್ನು ವಶಕ್ಕೆ ಪಡೆದಿರುವ ಜೆಪಿ ನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
